ಬೆಂಗಳೂರು: ರಾಜ್ಯದ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎರಡು ದಿನ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಗದಗ ಜಿಲ್ಲೆಯ ಹಲವು ಪಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಶನಿವಾರದಿಂದ ಮುಂದಿನ ಒಂದು ವಾರ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೆಡೆ ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಮಳೆ ಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





