ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯೆಲ್ಲೋ ಅಲರ್ಟ್ : ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಹೀಗಾಗಿ, ಕರಾವಳಿ ಭಾಗದ ಈ ಮೂರು ಜಿಲ್ಲೆಗಳಿಗೆ ಒಂದು ವಾರದವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆ ಮುನ್ಸೂಚನೆ: ಮೈಸೂರು, ಮಂಡ್ಯ, ಕೊಡಗು, ಹಾಸನ, ರಾಮನಗರ, ತುಮಕೂರು, ಕೋಲಾರ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಎಲ್ಲಿ ಮಳೆ ವರದಿ:ಕೊಡಗು ಜಿಲ್ಲೆಯ ಸೋಮವಾರಪೇಟೆ, ನಾಪೋಕ್ಲು, ಸಿದ್ದಾಪುರ, ಬೆಳ್ತಂಗಡಿ, ಪುತ್ತೂರು, ಮೂಡಿಗೆರೆ, ಸುಳ್ಯ, ಮಂಗಳೂರು, ಕುಮಟಾ, ಕಾರ್ಕಳ, ನಾಪೋಕ್ಲು, ಕೊಟ್ಟಿಗೆಹಾರ, ಕುಂದಾಪುರ, ಬೆಳಗಾವಿ, ಉಡುಪಿ, ಮುಂಡಗೋಡು, ಅರಕಲಗೂಡು, ಆಗುಂಬೆ, ಯಲ್ಲಾಪುರ, ಧರ್ಮಸ್ಥಳ, ಶೃಂಗೇರಿ, ಕೊಪ್ಪ, ಕಳಸ, ಬಾಳೆಹೊನ್ನೂರಿನಲ್ಲಿ ಮಂಗಳವಾರ ಹೆಚ್ಚಿನ ಮಳೆಯಾಗಿದೆ.
ಮತ್ತೊಂದೆಡೆ ಭಾರತೀಯರ ಹವಾಮಾನ ಇಲಾಖೆ ದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಕೆಲವು ರಾಜ್ಯಗಳಿಗೆ ರೆಡ್ ಅಲಟ್ ಘೋಷಣೆ ಮಾಡಿದೆ. ಕೆಲವು ಕಡೆ ಬಿರುಗಾಳಿ ಸಹಿತ ಮಳೆ ಆಗಲಿದೆ. ಪ್ರವಾಹ, ಗುಡ್ಡ ಕುಸಿತ, ಭೂಕುಸಿತದ ವಾರ್ನಿಂಗ್ ಕೊಟ್ಟಿದ್ದು, ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆಯೂ ಎಚ್ಚರಿಕೆ ನೀಡಿದೆ.
ಮುಂದಿನ ದಿನಗಳಲ್ಲಿ ದೇಶಾದ್ಯಂತ ಮಾನ್ಸೂನ್ ಚುರುಕು ಆಗಿರಲಿದೆ. ಪ್ರವಾಹ, ಭೂಕುಸಿತ, ಬೆಳೆ ಹಾನಿ ಮತ್ತು ಮೂಲಸೌಕರ್ಯ ಅಡ್ಡಿ ಅಪಾಯಗಳು ಹೆಚ್ಚಾಗಿವೆ.





