ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗಿನಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನು ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕಲಬುರ್ಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದೆ.





