Mysore
24
overcast clouds

Social Media

ಶನಿವಾರ, 25 ಏಪ್ರಿಲ 2026
Light
Dark

ಬಿಸಿಲಿನ ಆರ್ಭಟ ನಡುವೆಯೇ ರಾಜ್ಯಕ್ಕೆ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಬಿಸಿಲನ ಆರ್ಭಟ ಜೋರಾಗಿದ್ದು, ಬಿಸಿಲನ ಝಳಕ್ಕೆ ಜನರು ತತ್ತರಿಸಿದ್ದಾರೆ. ಈ ನಡುವೆಯೇ ಇದೀಗ, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

ಈ ಕುರಿತು ಮಾತನಾಡಿರುವ ಹವಾಮಾನ ಇಲಾಖೆ ತಜ್ಞ ಸಿ.ಎಸ್.ಪಾಟೀಲ್, ತಾಪಮಾನದ ವೈಪರಿತ್ಯದಿಂದ ಅಕಾಲಿಕ ಮಳೆಯಾಗುವ ಸಾಧ್ಯತೆ ಸಹ ಹೆಚ್ಚಿದೆ. ಈಗಾಗಲೇ ಉತ್ತರ ವಲಯಗಳಲ್ಲಿ ಸ್ವಲ್ಪ ಮಟ್ಟಿನ ಮಳೆ ಕಂಡು ಬಂದಿದ್ದು, ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಸೂಚನೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಅನೇಕ ಜಿಲ್ಲೆಗಳಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಟಿದ್ದು ನಗರದಲ್ಲಿನ ಬಿಸಿಲಿನ ತಾಪಮಾನ ಹಳ್ಳಿ ಭಾಗಗಳಿಗೆ ಹೋಲಿಸಿದರೆ, ಹಳ್ಳಿಗಳಲ್ಲಿ ಬಿಸಿಲಿನ ತಾಪಮಾನ 2 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಿದೆ. ತಾಪಮಾನದಿಂದ ರಾತ್ರಿ ಮತ್ತು ಹಗಲಿನಲ್ಲಿ ಉಷ್ಣಾಂಶ ಜಾಸ್ತಿ ಇರುತ್ತೆ. ಬಿಸಿಲಿನ ತಾಪಮಾನಕ್ಕೆ ಕೆರೆ, ಬಾವಿ, ಡ್ಯಾಂ ನೀರು ಆವಿಯಾಗುತ್ತಿದ್ದು, ಬಿಸಿಲಿಗೆ ಅನೇಕ ಜಲಾಶಯಗಳು ಬತ್ತಿ ಹೋಗುವ ಸಾಧ್ಯತೆ ಹೆಚ್ಚಿದೆ. ಇದರಿಂದ ಪ್ರಾಣಿ, ಪಕ್ಷಿ, ಜನರಿಗೆ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂದು ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

Tags:
error: Content is protected !!