ರಾಜ್ಯ

ರಣ ಬಿಸಿಲ ನಡುವೆಯೇ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲ ಅಬ್ಬರಕ್ಕೆ ಜನರು ಹೈರಾಣಾಗಿದ್ದಾರೆ. ಮುಂದಿನ 2 ದಿನಗಳಲ್ಲಿ ತಾಪಮಾನ ಇನ್ನಷ್ಟು ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ರಣ ಬಿಸಿಲ ನಡುವೆಯೇ ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ ಮತ್ತು ವಿಜಯಪುರದಲ್ಲಿ ಬಿಸಿಲ ನಡುವೆ ಗುಡುಗು ಸಹಿತ ಆಲಿಕಲ್ಲು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಗುಡುಗು, ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.

ಮಳೆಯ ನಡುವೆಯೇ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

3 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

9 hours ago