ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಕರ್ನಾಟಕದ ಮೇಲೂ ಭಾರೀ ಪರಿಣಾಮ ಬೀರಲಿದೆ ಎನ್ನಲಾಗಿದೆ.
ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಮತ್ತೆ ಮಳೆ ಶುರುವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಳೆಯಿಂದ ಡಿಸೆಂಬರ್.3ರವರೆಗೆ ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.
ಇನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಲಘುವಾಗಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.