ಬೆಂಗಳೂರು: ರಾಜ್ಯದಲ್ಲಿ ನವೆಂಬರ್.5ರಿಂದ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೊಂಥಾ ಚಂಡಮಾರುತದ ಬಳಿಕ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿದೆ. ಬಿಸಿಲ ವಾತಾವರಣ ಕಂಡುಬಂದಿದೆ. ಆದರೆ ನವೆಂಬರ್.5ರ ನಂತರ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ ಎಂದು ಹೇಳಲಾಗಿದೆ.





