ಬೆಂಗಳೂರು: ಹೊಸ ವರ್ಷಾಚರಣೆ ನಡುವೆಯೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮಂಡ್ಯ, ಕೋಲಾರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣವಿದ್ದು, ಸ್ವಲ್ಪ ಪ್ರಮಾಣದಲ್ಲಿ ಚಳಿಯಾಗುವ ಸಾಧ್ಯತೆಯಿದೆ. ಚಳಿಯಿಂದ ಆರೋಗ್ಯದ ಮೇಲೆ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹಾಗೂ ಬಿಸಿ ಆಹಾರ ಸೇವಿಸಬೇಕೆಂದು ವೈದ್ಯರು ಸೂಚನೆ ನೀಡಿದ್ದಾರೆ.





