mysuru rainy season
ಬೆಂಗಳೂರು : ಅವಧಿಗೂ ಮೊದಲೇ ಮುಂಗಾರು ಪ್ರವೇಶಿಸಿ ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಕೊಂಚ ಬಿಡುವು ಕೊಟ್ಟಿದ್ದು, ಇದೀಗ ಮತ್ತೆ ಜೂನ್ 9 ರಿಂದ ಮುಂಗಾರು ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಜೂನ್ 11 ರಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ. ಜೂ.12ಕ್ಕೆ ಕೊಡಗು, ದಾವಣಗೆರೆ, ವಿಜಯನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ ಹಾಗೂ ಕರಾವಳಿ ಜಿಲ್ಲೆಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುನ್ಸೂಚನೆ ನೀಡಲಾಗಿದೆ.
ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕಲಬುರಗಿ, ಬಾಗಲಕೋಟೆ, ಗದಗ, ಬೆಳಗಾವಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಮುಂದಿನ 7 ದಿನಗಳ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಹಾಗೂ ಜೂನ್ 9ರಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜೂ.11ಕ್ಕೆ ಬಳ್ಳಾರಿ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ದಕ್ಷಿಣ ರಾಜ್ಯಗಳಾದ ಕೇರಳ, ಕರಾವಳಿ ಕರ್ನಾಟಕದಲ್ಲಿ ವಾರವಿಡೀ ಮಳೆಯಾಗುವ ಸಾಧ್ಯತೆಯಿದೆ.
ಶಿವಮೊಗ್ಗ, ಹಾಸನ ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರಿನ, ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…