Rain God Varuna Roars Across the State: Reservoirs Reach Full Capacit
ಬೆಂಗಳೂರು: ಕಳೆದ ಮೂರು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯಿಂದ ಬಹುತೇಕ ಜಲಾಶಯಗಳು ಭರ್ತಿಯ ಹಂತಕ್ಕೆ ತಲುಪಿವೆ.
ಕೆಆರ್‍ಎಸ್, ನಾರಾಯಣಪುರ, ಹೇಮಾವತಿ, ಕಬಿನಿ ಸೇರಿದಂತೆ ಮತ್ತಿತರ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಭರ್ತಿಯ ಸನಿಹದಲ್ಲಿವೆ.
ಕೆಆರ್‍ಎಸ್ ಅಣೆಕಟ್ಟಿನಿಂದ ಕಾವೇರಿ ನದಿಗೆ 35 ಸಾವಿರ ಕ್ಯೂಸೆಕ್ಸ್ ನೀರು ಹರಿಬಿಡುತ್ತಿದ್ದು, ನದಿಪಾತ್ರದ ಜನತೆ ಎಚ್ಚರಿಕೆಯಿಂದಿರುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸಿದ್ಧ ರಂಗನತಿಟ್ಟು ಪಕ್ಷಿಧಾಮ ಸೇರಿ ಶ್ರೀರಂಗಪಟ್ಟಣ ತಾಲ್ಲೂಕಿನ ಪ್ರವಾಸಿ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಕೇರಳದ ವಯನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡು ಬಂದಿದ್ದು, ಜಲಾಶಯದಿಂದ 25,000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಪಿಲಾ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರು ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆಯಾಗಿದ್ದು, ಭದ್ರತಾ ದೃಷ್ಟಿಯಿಂದ ಆರು ಕ್ರಸ್ಟ್ ಗೇಟ್‌ಗಳ ಮೂಲಕ ನೀರನ್ನು ಹೊರಬಿಡಲಾಗುತ್ತಿದೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…