ರಾಜ್ಯ

ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆ !

ಬೆಂಗಳೂರು : ಸಿಲಿಕಾನ್‌ ಸಿಟಿ  ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.

ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ಮಂಡ್ಯ, ರಾಯಚೂರು, ವಿಜಯನಗರ, ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗಿದ್ದು, ಬಿಸಿಲಿನ ಝಳಕ್ಕೆ ರೋಸಿ ಹೋಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಗಂಟೆಗೆ 30 ರಿಂದ 40 ಕಿಲೋ ಮೀಟರ್ ಗಾಳಿ ವೇಗವಾಗಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ಜನ ಎಚ್ಚರದಿಂದ ಇರುವಂತೆ ತಿಳಿಸಿದೆ.

ಇನ್ನೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಧಾರವಾಡ, ವಿಜಯನಗರದ ಹೊಸಪೇಟೆಯ ಮರಿಯಮ್ಮನಹಳ್ಳಿ, ದೇವಲಾಪುರ ಸೇರಿದಂತೆ ನಾನಾ ಕಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

7 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

11 hours ago

ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ: ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…

12 hours ago

ಬೆಂಗಳೂರು| 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ: ವಿದೇಶಿ ಪ್ರಜೆ ಬಂಧನ

ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…

12 hours ago

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

12 hours ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

12 hours ago