ರಾಜ್ಯ

ಬಿಸಿಲಿನ ನಡುವೆ, ರಾಜ್ಯದ ಈ ಭಾಗದಲ್ಲಿ ಮಳೆ ಮುನ್ಸೂಚನೆ!

ಬೆಂಗಳೂರು : ಬಿಸಿಲಿನ ಬೇಗೆ ಹಾಗೂ ಸೆಖೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಈ ತಿಂಗಳೆ ವರ್ಷದ ಮಳೆ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

ಮಾ.11 ಮತ್ತು 12ರಂದು ಈ ವರ್ಷದ ಮೊದಲ ಹಾಗೂ ಬೇಸಿಗೆ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ಮೇಲ್ಮೆ ಸುಳಿ ಗಾಳಿ ಉಂಟಾಗಿರುವ ಪರಿಣಾಮದಿಂದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮಂಗಳವಾರ ಮತ್ತು ಬುಧವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆಗಳಿವೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಹಾಗೂ ಉತ್ತರಕರ್ನಾಟಕ ಭಾಗದಲ್ಲಿ ಒಣಹವೆ ಮುಂದುವರೆಯಲಿದೆ. ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡಕವಿದ ವಾತಾವರಣ ಕಂಡುಬರಲಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಂಟಿಗ್ರೇಡ್ ತಲುಪಿದ್ದು, ಕಲಬುರಗಿಯಲ್ಲಿ 39 ಡಿಗ್ರಿ ಸೆಂಟಿಗ್ರೇಡ್‍ನಷ್ಟು ಇದೆ. ಕೊಪ್ಪಳ, ಹಾವೇರಿ, ಧಾರವಾಡ, ಬಿಜಾಪುರ, ಬಾಗಲಕೋಟೆ ಜಿಲ್ಲೆಗಳಲ್ಲೂ 37 ಡಿಗ್ರಿ ಸೆಂಟಿಗ್ರೇಡ್‍ಗಿಂತ ಹೆಚ್ಚಿನ ಉಷ್ಣಾಂಶವಿರಲಿದೆ.

ಮಾರ್ಚ್ ತಿಂಗಳಲ್ಲಿ ಅಕಾಲಿಕ ಮಳೆಯಾಗುವುದು ವಾಡಿಕೆ. ಜನವರಿಯಿಂದ ಈ ತನಕ ರಾಜ್ಯದಲ್ಲಿ ಅಕಾಲಿಕ ಮಳೆಯಾಗಿಲ್ಲ. ಹೀಗಾಗಿ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದೆ. ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚು ಮಾರ್ಚ್-ಏಪ್ರಿಲ್, ಮೇ ತಿಂಗಳಿನಲ್ಲಿ ಬೀಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಡಿಕೇರಿ | ನಗರದಲ್ಲಿ ಮುಳ್ಳುಹಂದಿ ಪ್ರತ್ಯಕ್ಷ

ಮಡಿಕೇರಿ : ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಮುಳ್ಳುಹಂದಿ ಪ್ರತ್ಯಕ್ಷವಾಗಿದೆ. ಓಡಾಡಲು ಕಷ್ಟವಾಗುವ ಸ್ಥಿತಿಯಲ್ಲಿದ್ದ ಈ ಮುಳ್ಳುಹಂದಿ…

34 mins ago

ಹನೂರು | ಪಶುವೈದ್ಯಾಧಿಕಾರಿಗಳ ನಿರ್ಲಕ್ಷದಿಂದ ಸಾವಿಗೀಡಾದ 500 ನಾಟಿ ಕೋಳಿಗಳು

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು,…

1 hour ago

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

2 hours ago

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

3 hours ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

3 hours ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

4 hours ago