Mysore
26
few clouds

Social Media

ಶನಿವಾರ, 07 ಫೆಬ್ರವರಿ 2026
Light
Dark

ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಮಳೆ : ಕರಾವಳಿಗೆ ಯಲ್ಲೋ ಅಲರ್ಟ್‌

ಬೆಂಗಳೂರು : ರಾಜ್ಯದಲ್ಲಿ ಇಂದಿ‌ನಿಂದ ಮೂರು ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಜೋರು ಮಳೆ ಸುರಿಯುವ ಸಾಧ್ಯತೆಯಿದೆ.

ಇಂದು ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಕರಾವಳಿಗೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ಎರಡೂ ಭಾಗದಲ್ಲಿ ಗುಡುಗು ಮಿಂಚು ಸಹಿತ ಜೋರು ಮಳೆಯಾಗಲಿದೆ.

ಬೆಂಗಳೂರಿನನಲ್ಲಿ ತಡ ರಾತ್ರಿ ಮಳೆ ಸುರಿದಿತ್ತು. ಇಂದುಸಂಜೆ ಬಳಿಕ ಬೆಂಗಳೂರಿನಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ.

ಶನಿವಾರ ರಾತ್ರಿ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ರಾಮನಗರ, ಶಿವಮೊಗ್ಗ ಮಂಡ್ಯ, ಬೆಂಗಳೂರಿನ ಭಾಗದ ಹಲವೆಡೆ ರಾತ್ರಿ ಜೋರು ಮಳೆಯಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!