ಬೆಂಗಳೂರು : ಇಂದಿನಿಂದ 2 ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಾಗ ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದೆ. ಇದನ್ನ ಹೊರತುಪಡಿಸಿದರೆ ನಗರದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದ್ದು, ಜನರು ಮನೆಯಿಂದ ಹೊರಗಡೆ ಕಾಲಿಡದಂತಹ ಪರಿಸ್ಥಿತಿ ನಿರ್ಮಾಣವಾಗಿಬಿಟ್ಟಿದೆ.
ಇದರ ನಡುವೆಯೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ರಾಜ್ಯದಲ್ಲಿ ಇಂದಿನಿಂದ 2 ದಿನಗಳ ಕಾಲ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಾಮರಾಜನಗರ, ಕೊಡಗು, ಮೈಸೂರು, ದಾವಣಗೆರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆರಾಯ ಕೃಪೆ ತೋರಲಿದ್ದಾನೆ ಎಂದು ತಿಳಿಸಿದೆ. ಹಾಗೆಯೇ ಮುಂದಿನ ಕೆಲವೇ ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಭಾಗಗಲ್ಲಿಯೂ ಸಾಧಾರಣ ಮಳೆ ಸುರಿಯಲಿದೆ ಎಂದು ನೀರೀಕ್ಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಮಾಡಿದೆ.
ಇನ್ನು ಇಂದು (ಮಾರ್ಚ್ 23) ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆ ಸುರಿಯಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಮತ್ತೊಂದೆಡೆ ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿರುವ ಕಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.ರಾಜ್ಯ ರಾಜಧಾನು ಇಂದು ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲು ಆಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…