ಬೆಂಗಳೂರು : ಇಂದು ನಾಳೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉ.ಕನ್ನಡ ಜಿಲ್ಲೆಯ ಕೆಲವೆಡೆ ಹಾಗೂ ಉತ್ತರ ಒಳನಾಡಿನ ಭಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ಕಲಬುರಗಿ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆಯಿದೆ ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣವಿರಲಿದ್ದು, ಮುಂಜಾನೆ ಮಂಜು ಆವರಿಸಿದ ವಾತಾವರಣ ಇರಲಿದೆ. ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡಿರುವ ‘ತೇಜ್’ ಚಂಡಮಾರುತದಿಂದ ರಾಜ್ಯಕ್ಕೆ ಯಾವುದೇ ಅಪಾಯವಿಲ್ಲ ಎಂದು ತಿಳಿಸಿರುವ ಹವಾಮಾನ ಇಲಾಖೆ, ಇಂದು ನಾಳೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…