Mysore
21
overcast clouds

Social Media

ಶುಕ್ರವಾರ, 27 ನವೆಂಬರ್ 2026
Light
Dark

ಮೈಸೂರು ಸೇರಿ 8 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ | ನವೆಂಬರ್ 29, 30ರಂದು ರಾಜ್ಯಾದ್ಯಂತ ಒಣಹವೆ

ಬೆಂಗಳೂರು: ಮೈಸೂರು ಸೇರಿದಂತೆ ಕರ್ನಾಟಕದ ಎಂಟು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಯಿದೆ. ಎಲ್ಲೆಲ್ಲಿ ಮಳೆಯ ಮುನ್ಸೂಚನೆ ಇದೆ ಗೊತ್ತಾ?

ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಕನ್ನಡದಲ್ಲಿ ಬಹುತೇಕ ಒಣಹವೆ ಇರಲಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಕಡೆಗಳಲ್ಲೂ ನವೆಂಬರ್ 27 ಮತ್ತು 28ರಂದು ಮಳೆಯ ಸಾಧ್ಯತೆಯಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ನವೆಂಬರ್ 29 ಮತ್ತು 30ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags:
error: Content is protected !!