ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ಕರ್ನಾಟಕದಲ್ಲಿ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಾಲಿ ಹವಾಮಾನ ಪರಿಸ್ಥಿತಿ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆಯು, ಆಗ್ನೇಯ ಮತ್ತು ಪಕ್ಕದ ನೈಋತ್ಯ ಬಂಗಾಳಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆ ಈಗ ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳಕೊಲ್ಲಿಯ ಮೇಲೆ ಇದೆ. ಸಮುದ್ರ ಮಟ್ಟದಿಂದ 3.1 ಕಿ.ಮೀವರೆಗೆ ವಿಸ್ತರಿಸಿದೆ ಎಂದು ಮಾಹಿತಿ ನೀಡಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಜನವರಿ.13 ಮತ್ತು 14ರಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಪ್ರಮುಖವಾಗಿ ಜನವರಿ.13ರಂದು ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉಳಿದ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆಯಿದೆ.
ಇನ್ನು ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಂಜು ಬೀಳಲಿದ್ದು, ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.
ಇನ್ನು ಜನವರಿ.14ರಂದು ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ತುಮಕೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಟೆಹ್ರಾನ್ : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…
ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…
ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…