ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.8ರವರೆಗೂ ಪೂರ್ವ ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.
ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ರೈತರು ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.





