ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.
ಇನ್ನು ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಹಾವೇರಿ, ಗದಗ, ಧಾರವಾಡ, ಬೀದರ್‌ನಲ್ಲಿ ಇಂದು ಹಾಗೂ ನಾಳೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.





