ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಕಾಲ ಮತ್ತೆ ಮಳೆ ಆರಂಭವಾಗಲಿದೆ.
ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಶುರುವಾಗಲಿದೆ.
ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ.
ಹೆಚ್ಚುಕಡಿಮೆ ಆ.25ರವರೆಗೂ ರಾಜ್ಯದ ಹಲವು ಭಾಗಗಳಲ್ಲಿ ಮತ್ತೆ ಮಳೆ ಆರಂಭವಾಗಲಿದೆ. ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ. ವಾತಾವರಣದಲ್ಲಿ ಬದಲಾವಣೆ ಉಂಟಾಗಿದ್ದು, ಆ.26ರಿಂದ 29ರವರೆಗೆ ಸಾಧಾರಣ ಪ್ರಮಾಣದ ಮಳೆಯಾಗಲಿದೆ. ಈ ಅವಯಲ್ಲಿ ಭಾರೀ ಮಳೆಯಾಗುವ ಲಕ್ಷಣಗಳು ಇದ್ದವು. ಉತ್ತರ ಭಾರತದಲ್ಲಿ ಕುಂಭದ್ರೋಣ ಮಳೆಯಾಗುತ್ತಿರುವುದರಿಂದ ವಾತಾರಣದಲ್ಲಿ ಬದಲಾವಣೆಯಾಗಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳು ವಿರಳವಾಗಿದೆ.
ರಾಜ್ಯದ ಒಳನಾಡಿನ ಬಹುತೇಕ ಭಾಗಗಳಲ್ಲಿ 10ರಿಂದ 20 ಮಿ.ಮೀನಷ್ಟು ಮಳೆಯಾಗುವ ಮುನ್ಸೂಚನೆಗಳಿವೆ. ಉತ್ತರ ಭಾರತದಲ್ಲಿ ವಾಯುಭಾರ ಕುಸಿತದಿಂದ ಮಳೆ ಅಬ್ಬರಿಸುತ್ತಿದ್ದು, ಅದರ ನೇರ ಪರಿಣಾಮ ರಾಜ್ಯದ ಮೇಲಾಗುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleʼಪ್ರೇಮಲೋಕʼಕ್ಕೆ ಕಾಲಿಟ್ಟ ʼಏಕಾಂಗಿʼಯ ಮಗ