ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ ಕರ್ನಾಟಕದ ನದಿಗಳು ಜೀವಂತಗೊಂಡಿವೆ. ಅದರ ನೇರ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಜೋಗ್‍ಪಾಲ್ಸ್‌ಗೂ ಮತ್ತೆ ಜೀವಕಳೆ ಮರಳಿದೆ.
ವಿಶೇಷವಾಗಿ ಬೆಳಗಾವಿ ಸೇರಿದಂತೆ ಗಡಿಭಾಗದ ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚಾಗಿರುವುದರಿಂದ ರೈತರು ಮತ್ತು ನೀರಾವರಿ ಅವಲಂಬಿತ ಪ್ರದೇಶಗಳಲ್ಲಿ ನಿರೀಕ್ಷೆಯ ವಾತಾವರಣ ಮೂಡಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂಬರುವ ದಿನಗಳಲ್ಲಿ ಮಳೆಯ ಆರ್ಭಟ ಹೀಗೆಯೇ ಮುಂದುವರಿಯಲಿದೆ. ಇದರಿಂದ ಒಳಹರಿವಿನ ಪ್ರಮಾಣ ದುಪ್ಪಟ್ಟಾಗಲಿದ್ದು, ಜಲಾಶಯಗಳು ಮತ್ತಷ್ಟು ಬೇಗ ಭರ್ತಿಯಾಗುವ ನಿರೀಕ್ಷೆಯಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೃಷ್ಣಾ ಮತ್ತು ಅದರ ಉಪನದಿಗಳ ಜಲಪ್ರವಾಹದಲ್ಲಿ ಏರಿಕೆ ಕಂಡುಬರುತ್ತಿದೆ. ಇದರಿಂದ ಉತ್ತರ ಕರ್ನಾಟಕ ಭಾಗದ ನದಿಗಳಿಗೆ ನೀರಿನ ಹರಿವು ಹೆಚ್ಚಾಗಿದೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ಉತ್ತರಕನ್ನಡ ಭಾಗಗಳಲ್ಲಿ ಇದರ ಪ್ರಭಾವ ಸ್ಪಷ್ಟವಾಗಿ ಕಾಣಿಸುತ್ತಿದ್ದು, ಜಲಾಶಯಗಳ ನೀರಿನ ಮಟ್ಟವೂ ನಿಧಾನವಾಗಿ ಏರಿಕೆಯಾಗುತ್ತಿದೆ.
ಬಿತ್ತನೆಗೆ ಕಾಯುತ್ತಿದ್ದ ರೈತರಿಗೆ ಇದು ತುಸು ನಿಟ್ಟುಸಿರು ತಂದಿದ್ದು, ಕೆರೆ-ಕಟ್ಟೆಗಳು ಮತ್ತು ಸಣ್ಣ ಜಲಮೂಲಗಳಲ್ಲೂ ನೀರಿನ ಸಂಗ್ರಹ ಹೆಚ್ಚಾಗುವ ನಿರೀಕ್ಷೆ ಇದೆ. ಜಲಾಶಯಗಳ ಒಳಹರಿವು ಹೆಚ್ಚಾಗುವುದು ಕುಡಿಯುವ ನೀರು, ನೀರಾವರಿ ಹಾಗೂ ವಿದ್ಯುತ್ ಉತ್ಪಾದನೆ ದೃಷ್ಟಿಯಿಂದಲೂ ಮಹತ್ವದ ಬೆಳವಣಿಗೆಯಾಗಿದೆ.
ಭಾರೀ ಗಾಳಿಗೆ ಮರ ಬಿದ್ದು ಮಲೆನಾಡಿನಾದ್ಯಂತ ತೀವ್ರ ಅನಾಹುತ ಸಂಭವಿಸಿದೆ. ರಸ್ತೆಗೆ ಬೃಹತ್ ಮರಗಳು ಬಿದ್ದು, ಹತ್ತಾರು ಗ್ರಾಮಗಳಲ್ಲಿ ಸಂಪರ್ಕ ಕಡಿತಗೊಂಡಿದೆ. ವಿದ್ಯುತ್ ತಂತಿಗಳ ಮೇಲೆ ಮರ ಬಿದ್ದು ಮಲೆನಾಡ ಹತ್ತಾರು ಹಳ್ಳಿಗಳು ಕತ್ತಲಲ್ಲಿ ಮುಳುಗಿದೆ.
ಇನ್ನೊಂದೆಡೆ ಧಾರಾಕಾರ ಮಳೆಯಿಂದ ಮಲೆನಾಡಿನ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಮೂಡಿಗೆರೆ ತಾಲೂಕಿನ ಕೋಗಿಲೆ ಗ್ರಾಮದ ಹಬ್ಬಿ ಹಳ್ಳ ಮೈದುಂಬಿ ಉಕ್ಕಿ ಹರಿಯುತ್ತಿದ್ದು, ಹಚ್ಚಹಸಿರಿನ ಪ್ರಕೃತಿ, ಮಂಜಿನ ನಡುವೆ ಹರಿಯುವ ಹಳ್ಳಗಳು ಪ್ರವಾಸಿಗರು ಹಾಗೂ ಸ್ಥಳೀಯರ ಗಮನ ಸೆಳೆಯುತ್ತಿವೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…