Rain Intensifies; Red Alert Issued
ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡ ಹಿನ್ನೆಲೆಯಲ್ಲಿ ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ.೨೪ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ೩ ದಿನಗಳ ಕಾಲ ಬೆಂಗಳೂರಿನಲ್ಲೂ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ತುಮಕೂರು, ದಾವಣಗೆರೆ, ಚಿತ್ರದುರ್ಗ, ವಿಜಯಪುರ, ಕೊಪ್ಪಳ, ವಿಜಯನಗರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…