ರಾಜ್ಯ

ಹುತಾತ್ಮ ರೈತರ ಶಾಂತಿಗಾಗಿ ರೈತ ನಮನ ರ್ಯಾಲಿ

ತಮಿಳುನಾಡು: ರೈತರು ಜಾಗೃತರಾಗಿ ಸಂಘಟಿತ ಹೋರಾಟ ನಡೆಸಬೇಕು. ನಿರ್ಲಕ್ಷ್ಯ ಮಾಡಿದರೆ ರೈತ ಕುಲವೇ ನಾಶವಾಗುತ್ತದೆ ಎಂದು ಕರ್ನಾಟಕ ರಾಜ್ಯದ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಎಚ್ಚರಿಕೆ ನೀಡಿದರು.

ತಮಿಳುನಾಡಿನಲ್ಲಿ ನಡೆದ ರೈತರಿಗೆ ಚೈತನ್ಯ ತುಂಬಿದ ತಮಿಳುನಾಡು ವ್ಯವಸಾಯ ಸಂಘ ನೇತಾರ ದಿವಂಗತ ನಾರಾಯಣಸ್ವಾಮಿನಾಯ್ಡು ನೆನಪಿನಲ್ಲಿ ಬೃಹತ್ ರೈತ ನಮನ ರ್ಯಾಲಿ ಸಮಾವೇಶ ಉದ್ಘಾಟನೆ ಮಾತನಾಡಿದ ಅವರು, ದೇಶದ ರೈತರ ಹಿತಕ್ಕಾಗಿ ದೆಹಲಿಯ ಸುತ್ತ ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶದ ರೈತರು ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿಗಾಗಿ ನಿರಂತರ ಹೋರಾಟ ನಡೆಸುತ್ತಿದ್ದಾರೆ ಎಂದರು.

ರೈತರ ಹಾಗೂ ಕೃಷಿ ಕಾರ್ಮಿಕರ ಸಂಪೂರ್ಣ ಸಾಲಮನ್ನಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ನಾಲ್ಕು ಸುತ್ತಿನ ಮಾತುಕತೆ ನಡೆಸಿ ಯಾವುದೇ ಕ್ರಮ ಜಾರಿ ಮಾಡಿಲ್ಲ. ಅದಕ್ಕಾಗಿ ಜುಲೈ 8ನೇ ತಾರೀಕು ದೇಶಾದ್ಯಂತ ಬಿಜೆಪಿ ಹೊರತುಪಡಿಸಿ ಉಳಿದ ಎಲ್ಲಾ ಸಂಸದರಿಗೆ ಜ್ಞಾಪನಾ ಪತ್ರ ಸಲ್ಲಿಸಿ ಎಂದರು.

ಈ ಮೂಲಕ ಮುಂದಿನ ಲೋಕಸಭಾ ಅಧಿವೇಶನದಲ್ಲಿ ಖಾಸಗಿ ಮಸೂದೆ ಮಂಡಿಸುವಂತೆ ಸಂಸದರಿಗೆ ಒತ್ತಾಯಿಸಲಾಗುವುದು. ಬಂಡವಾಳ ಶಾಹಿಗಳ ಮರ್ಜಿಗೆ ಸರ್ಕಾರಗಳು ಮಣಿಯುತ್ತಿದ್ದು ಕೃಷಿ ಕ್ಷೇತ್ರದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ತಮಿಳುನಾಡು ವ್ಯವಸಾಯ ಸಂಘದ ಅಧ್ಯಕ್ಷ ರಾಮನಗೌಡರ್ ಮಾತನಾಡಿ, ದೇಶದಲ್ಲಿ ರೈತ ಪರ ಹೋರಾಟ ಮಾಡಿ ತಮ್ಮ ಪ್ರಾಣ ಕಳೆದುಕೊಂಡ ಸಾವಿರಾರು ರೈತರ ಆತ್ಮಕ್ಕೆ ಶಾಂತಿ ಕೊರಲು. ದಿವಂಗತ ನಾರಾಯಣಸ್ವಾಮಿ ನಾಯ್ಡು ರವರ ನೆನಪಿಗಾಗಿ ಈ ಸಮಾವೇಶ ಆಯೋಜಿಸಲಾಗಿದೆ ಎಂದರು.

ತೆಲಂಗಾಣ ರಾಜ್ಯದ ಅರಿಸಿನ ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ನರಸಿಂಹನಾಯ್ಡು ಮಾತನಾಡಿ, ಸರ್ಕಾರಗಳು ರೈತರ ಹೆಸರಿನಲ್ಲಿ ಆಡಳಿತ ನಡೆಸುತ್ತಾ ರೈತರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ ಆದ್ದರಿಂದ ರೈತರು ಜಾಗೃತವಾಗಿರಬೇಕು ಎಂದರು.

ಕೃಷ್ಣಗಿರಿಯ ಬಸ್ ನಿಲ್ದಾಣದಿಂದ ಸಮಾವೇಶದ ತನಕ ಬೃಹತ್ ರೈತರ ರಾಲಿ ನಡೆಸಲಾಯಿತು. ರ್ಯಾಲಿಯಲ್ಲಿ ಸಾವಿರಾರು ರೈತರು ಜಯಘೂಷ ಹಾಕುತ ಮೆರವಣಿಗೆಯಲ್ಲಿ ಸಾಗಿದರು. ತಮಿಳುನಾಡಿನ ವಿವಿಧ ಜಿಲ್ಲೆಗಳ ರೈತ ಮುಖಂಡರು ಹಾಗೂ ಕರ್ನಾಟಕದ ಹತ್ತಳ್ಳಿ ದೇವರಾಜ್, ಉಡಿಗಾಲ ರೇವಣ್ಣ, ಸುಂದ್ರಪ್ಪ ಭಾಗವಹಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ದಸರಾ ಖರ್ಚಿನ ಭಾರ ಇಳಿಸಿದ ಟಿಕೆಟ್ ಮಾರಾಟದ ಆದಾಯ

ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…

8 mins ago

ದಸರಾ: ರಾಜಪಥದಲ್ಲಿ ಅಂಬಾರಿ ಸಂಚಾರ!

ಪ್ರಶಾಂತ್ ಎಸ್. ಕೆಎಸ್‌ಟಿಡಿಸಿ ವತಿಯಿಂದ ವ್ಯವಸ್ಥೆ; ಪ್ರತಿನಿತ್ಯ ೩ ಟ್ರಿಪ್‌ಗಳಲ್ಲಿ ಪ್ರಯಾಣ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ‘ಅಂಬಾರಿ ಬಸ್’…

14 mins ago

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

18 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

19 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

19 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

19 hours ago