Mysore
26
haze

Social Media

ಗುರುವಾರ, 01 ಜನವರಿ 2026
Light
Dark

ಕೇಂದ್ರ ಬಿಜೆಪಿ ನಾಯಕರಿಂದ ರಾಜಭವನ ದುರುಪಯೋಗ: ತಿಮ್ಮಾಪೂರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯದ ದುರುದ್ದೇಶ ಎಂಬುದು ಸ್ಪಷ್ಟವಾಗಿದೆ ಎಂದು ಸಚಿವ ಆರ್‌.ಬಿ ತಿಮ್ಮಾಪುರ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಒತ್ತಡದಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.

ಬಿಜೆಪಿ-ಜೆಡಿಎಸ್ ನಾಯಕರ ಹಲವು ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಸಿದ್ದ ಕಡತಗಳು ರಾಜಭವನದಲ್ಲೇ ಧೂಳು ತಿನ್ನುತ್ತಿವೆ. ಸಿದ್ದರಾಮಯ್ಯ ಅವರ ವಿರುದ್ಧ ರಾಜಕೀಯ ಕಾರಣಕ್ಕಾಗಿ ಷಡ್ಯಂತ್ರದ ಭಾಗವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಇದನ್ನು ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸರ್ಕಾರ ಸಮರ್ಥವಾಗಿ ಎದುರಿಸುತ್ತದೆ.

ಕಾಂಗ್ರೆಸ್‌ನ ಎಲ್ಲಾ ಶಾಸಕರು, ಸಚಿವರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ಬಿಜೆಪಿ ಷಡ್ಯಂತ್ರಕ್ಕೆ ಹೆದರುವ ಮಾತೇ ಇಲ್ಲ ಎಂದು ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರೆಲ್ಲರೂ ಸಿಎಂಗೆ ಬೆಂಬಲ ನೀಡುತ್ತಿರುವುದಾಗಿ ಆರ್‌.ಬಿ ತಿಮ್ಮಾಪುರ ಹೇಳಿದರು.

Tags:
error: Content is protected !!