ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯದ ದುರುದ್ದೇಶ ಎಂಬುದು ಸ್ಪಷ್ಟವಾಗಿದೆ ಎಂದು ಸಚಿವ ಆರ್.ಬಿ ತಿಮ್ಮಾಪುರ ಆಕ್ರೋಶ ಹೊರಹಾಕಿದ್ದಾರೆ.
ರಾಜ್ಯ ಮತ್ತು ಕೇಂದ್ರ ಬಿಜೆಪಿ ನಾಯಕರ ಒತ್ತಡದಿಂದ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.
ಬಿಜೆಪಿ-ಜೆಡಿಎಸ್ ನಾಯಕರ ಹಲವು ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಲ್ಲಿಸಿದ್ದ ಕಡತಗಳು ರಾಜಭವನದಲ್ಲೇ ಧೂಳು ತಿನ್ನುತ್ತಿವೆ. ಸಿದ್ದರಾಮಯ್ಯ ಅವರ ವಿರುದ್ಧ ರಾಜಕೀಯ ಕಾರಣಕ್ಕಾಗಿ ಷಡ್ಯಂತ್ರದ ಭಾಗವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಇದನ್ನು ಮುಖ್ಯಮಂತ್ರಿಗಳು ಹಾಗೂ ರಾಜ್ಯ ಸರ್ಕಾರ ಸಮರ್ಥವಾಗಿ ಎದುರಿಸುತ್ತದೆ.
ಕಾಂಗ್ರೆಸ್‌ನ ಎಲ್ಲಾ ಶಾಸಕರು, ಸಚಿವರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿದ್ದೇವೆ. ಬಿಜೆಪಿ ಷಡ್ಯಂತ್ರಕ್ಕೆ ಹೆದರುವ ಮಾತೇ ಇಲ್ಲ ಎಂದು ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರೆಲ್ಲರೂ ಸಿಎಂಗೆ ಬೆಂಬಲ ನೀಡುತ್ತಿರುವುದಾಗಿ ಆರ್.ಬಿ ತಿಮ್ಮಾಪುರ ಹೇಳಿದರು.
ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…
ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…
ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್ ಹಾಗೂ ಖಾಸಗಿ ಬಸ್ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…
ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್ ಹಬ್ಬವು ನಂಬಿಕೆಯೆಂಬ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…