Mysore
25
clear sky

Social Media

ಗುರುವಾರ, 11 ಡಿಸೆಂಬರ್ 2025
Light
Dark

ವಿಶ್ವ ದರ್ಜೆಯಲ್ಲಿಯೇ ಬೆಂಗಳೂರು ಹೂಡಿಕೆಗೆ ಹೇಳಿಮಾಡಿಸಿದ ಸ್ಥಳವಾಗಿದೆ : ರಾಜನಾಥ್‌ ಸಿಂಗ್‌

ಬೆಂಗಳೂರು: ಮೂಲಸೌಕರ್ಯ ಮತ್ತು ಕಾರ್ಯ ಪರಿಸರವನ್ನು ಹೊಂದಿರುವ ಬೆಂಗಳೂರು ವಿಶ್ವ ದರ್ಜೆಯ ಮಟ್ಟದಲ್ಲಿಯೇ ಸ್ಥಾನಗಳಿಸಿದ್ದು, ಬಂಡವಾಳ ಹೂಡಿಕೆಗೆ ಹೇಳಿ ಮಾಡಿಸಿದ ಸ್ಥಳವಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು(ಫೆಬ್ರವರಿ.11) ಇನ್‌ವೆಸ್ಟ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹೂಡಿಕೆದಾರರು ಇಲ್ಲಿ ಬಂಡವಾಳ ಹೂಡಿದರೆ ಇಡೀ ದೇಶವೇ ಅವರ ಬೆನ್ನಿಗಿರಲಿದೆ. ಈ ದೇಶದ ಭವಿಷ್ಯದ ಬಗ್ಗೆ ಅನುಮಾನವಿರುವವರು ಒಮ್ಮೆ ಬೆಂಗಳೂರಿಗೆ ಬಂದು ಇಲ್ಲಿನ ಐಟಿ, ಸ್ಟಾರ್ಟಪ್ ಹಾಗೂ ಇನ್ನಿತರ ಕ್ರಾಂತಿಕಾರಕ ಸಂಶೋಧನೆಗಳನ್ನು ನೋಡಿದರೆ, ಅವರ ಅನುಮಾನಗಳೆಲ್ಲಾ ನಿವಾರಣೆಯಾಗಿ ಹೋಗುತ್ತವೆ ಎಂದಿದ್ದಾರೆ.

ಕರ್ನಾಟಕ ಜ್ಞಾನ ಹಾಗೂ ಸಂಪತ್ತು ಎರಡೂ ಮೇಳೈಸಿರುವ ರಾಜ್ಯವಾಗಿದ್ದು, ಭಾರತದ ತಂತ್ರಜ್ಞಾನದ ರಾಜಧಾನಿಯಾಗಿದೆ. ಅಲ್ಲದೇ ಈ ಬೆಂಗಳೂರಿನಲ್ಲಿ ವೈಮಾಂತರಿಕ್ಷ, ಕೃತಕ ಬುದ್ಧಿಮತ್ತೆ, ಪ್ರತಿಭೆ ಹಾಗೂ ಯುವಜನರ ಆಗರವಾಗಿದೆ. ಈ ನಗರದ ಮಹತ್ತ್ವಾಕಾಂಕ್ಷೆ, ಶಕ್ತಿ ಮತ್ತು ಇಲ್ಲಿನ ನಿರ್ಣಾಯಕ ಕಾರ್ಯಗಳು ದೇಶವನ್ನು ಎತ್ತರಕ್ಕೆ ಕೊಂಡೆಯ್ಯುತ್ತಿವೆ. ಜೊತೆಗೆ ಸದ್ಯದಲ್ಲೇ ಇಲ್ಲಿಂದ ಕೃತಕ ಬುದ್ಧಿಮತ್ತೆ ಕ್ಷೇತ್ರದ ಮೊಟ್ಟ ಮೊದಲ ಮಾದರಿ ಸಹ ಹೊರಬರಲಿದೆ. ಹೀಗಾಗಿ ಇದಕ್ಕೆಲ್ಲಾ ಬೆಂಗಳೂರಿನ ಮಾನವ ಸಂಪನ್ಮೂಲ ಹಾಗೂ ಸನ್ನದ್ಧವಾಗಿರುವ ಪ್ರತಿಭೆಯೇ ಕಾರಣ ಎಂದು ಹೇಳಿದ್ದಾರೆ.

ಇನ್ನೂ ಮಾರುಕಟ್ಟೆ ಆಧರಿತ ಆರ್ಥಿಕತೆ ಮಾತ್ರ ಸುಸ್ಥಿರ ಆರ್ಥಿಕತೆಯನ್ನು ಸೃಷ್ಟಿಸಬಲ್ಲದು. ಇದು ಸಾಧ್ಯವಾಗಬೇಕೆಂದರೆ ಖಾಸಗಿ ಉದ್ಯಮಿಗಳು ಪ್ರಮುಖವಾಗಿದ್ದಾರೆ. ಏಕೆಂದರೆ ಈ ಹಿಂದೆ ಹೂಡಿಕೆದಾರರಿಗೆ ಕೆಂಪುಪಟ್ಟಿಯ ಸಂಕಷ್ಟ ಎದುರಾಗುತ್ತಿತ್ತು. ಆದರೆ ಇದೀಗ ರತ್ನಗಂಬಳಿಯ ಸ್ವಾಗತ ಸಿಗುತ್ತಿದೆ. ಭಾರತವು ಜಗತ್ತಿನ ಅತಿದೊಡ್ಡ ಮಾರುಕಟ್ಟೆಯಾಗಿ ಬೆಳೆಯುತ್ತಿದೆ. ಇದಕ್ಕೆ ತಕ್ಕಂತೆ ಸರಕಾರದಿಂದ ಪ್ರಮುಖ ನಿರ್ಧಾರಗಳೂ ಹೊರಬರುತ್ತಿವೆ. ಬೆಂಗಳೂರಿನ ನಿರ್ಣಾಯಕ ಪಾತ್ರದಿಂದ ಭಾರತವು ವೈಮಾಂತರಿಕ್ಷ ಕ್ಷೇತ್ರದಲ್ಲೂ ಅಸಾಧಾರಣ ಸಾಧನೆಗಳನ್ನು ಎಂದು ತಿಳಿಸಿದ್ದಾರೆ.

Tags:
error: Content is protected !!