ಬೆಂಗಳೂರು: ಭಾರತದ ಆರ್ಥಿಕತೆಯಲ್ಲಿ ರಕ್ಷಣಾ ಉದ್ಯಮದ ಪಾಲುದಾರಿಕೆಯನ್ನು ಹೆಚ್ಚಿಸುವ ಗುರಿಯೊಂದಿಗೆ, ರಕ್ಷಣಾ ಕ್ಷೇತ್ರದಲ್ಲಿ ಖಾಸಗಿ ಭಾಗೀದಾರಿಕೆಯನ್ನು ಕೇಂದ್ರ ಸರ್ಕಾರ ಉತ್ತೇಜಿಸುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.10) ನಡೆಯುತ್ತಿರುವ ಏರೋ ಇಂಡಿಯಾ 2025ರ ಸಿಇಒ ದುಂಡು ಮೇಜಿನ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ಖಾಸಗಿ ರಕ್ಷಣಾ ಕೈಗಾರಿಕಾ ವ್ಯವಸ್ಥೆಯ ಉತ್ಪನ್ನಗಳ ಬಳಕೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದೆ. ಅಲ್ಲದೇ ಈ ಉತ್ಪನ್ನಗಳ ತಯಾರಿಕೆಗೆ ಹಾಗೂ ರಫ್ತಿಗೆ ಅನುಮತಿ ನೀಡುತ್ತದೆ ಎಂದರು.
ಭಾರತವನ್ನು 2047ರ ವೇಳೆಗೆ ಅಭಿವೃದ್ಧಿ ಹೊಂದುತ್ತಿರುವ ದೇಶದಿಂದ, ಅಭಿವೃದ್ಧಿ ಹೊಂದಿದ ದೇಶಕ್ಕೆ ಪರಿವರ್ತನೆ ಮಾಡುವುದು ಕೇಂದ್ರ ಸರ್ಕಾರದ ಗುರಿಯಾಗಿದೆ. ಹಾಗಾಗಿ ಅದಕ್ಕೆ ಪೂರಕವಾಗಿ ತಮ್ಮ ರಕ್ಷಣಾ ಉದ್ಯಮವನ್ನು ಒಟ್ಟಾರೆ ರಾಷ್ಟ್ರೀಯ ಆರ್ಥಿಕತೆಯ ಮುಖ್ಯ ಪಾಲುದಾರ ಕ್ಷೇತ್ರವನ್ನಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಹಲವು ಪರಿವರ್ತಕ ಕ್ರಮಗಳನ್ನು ತೆಗೆದುಕೊಂಡಿದಡ ಎಂದು ಹೇಳಿದರು.
ಇನ್ನೂ ರಕ್ಷಣಾ ಕ್ಷೇತ್ರದಲ್ಲಿ ಈಸ್ ಆಫ್ ಡೂಯಿಂಗ್ ಬ್ಯುಸಿನೆಸ್ ಪರಿಕಲ್ಪನೆಯನ್ನು ಉತ್ತೇಜಿಸಲು ಹಾಗೂ ರಕ್ಷಣಾ ವಲಯಕ್ಕೆ ಹಣಕಾಸಿನ ನೆರವು ನೀಡಲು, ರಕ್ಷಣಾ ಪರೀಕ್ಷಾ ಮೂಲಸೌಕರ್ಯ ಯೋಜನೆಯನ್ನು ಪರಿಚಯಿಸಲಾಗಿದೆ. ಭಾರತವು ರಕ್ಷಣಾ ರಫ್ತು ವಹಿವಾಟವು 2013-14ರ ಆರ್ಥಿಕ ವರ್ಷಕ್ಕೆ ಹೋಲಿಸಿದರೆ, ಕಳೆದ 10 ವರ್ಷಗಳಲ್ಲಿ ಶೇ. 31 ಪಟ್ಟು ಬೆಳವಣಿಗೆಯನ್ನು ಕಂಡಿದೆ ಎಂದು ಮಾಹಿತಿ ನೀಡಿದರು.
ವಿಶ್ವದಲ್ಲಿ ಆಧುನಿಕ ಯುದ್ಧದ ಸ್ವರೂಪವು ವೇಗವಾಗಿ ಬದಲಾಗುತ್ತಿರುವುದರಿಂದ, ನಾವು ಇದಕ್ಕೆ ಪರಿಹಾರಗಳನ್ನು ಸಹ ಅಷ್ಟೇ ವೇಗವಾಗಿ ಅಳವಡಿಸಿಕೊಳ್ಳಬೇಕು. ಜೊತೆಗೆ ಶುದ್ಧ ಹಾರ್ಡ್‌ವೇರ್ ಆಧಾರಿತ ಸಿಸ್ಟಮ್ ಮೇಲೆ ಅವಲಂಬಿತವಾಗಿದ್ದ ಈ ಮೊದಲಿನ ಯುದ್ಧ ವ್ಯವಸ್ಥೆಯು, ಇದೀಗ ಸಾಫ್ಟ್‌ವೇರ್ ಆಧಾರಿತ ವ್ಯವಸ್ಥೆಗಳಿಗೆ ಒಗ್ಗಿಕೊಳ್ಳುತ್ತಿದೆ. ಹೀಗಾಗಿ ಬಾಹ್ಯಾಕಾಶ-ಆಧಾರಿತ ಸಂಚರಣೆ ವ್ಯವಸ್ಥೆ, ಬಾಹ್ಯಾಕಾಶ-ಆಧಾರಿತ ಸಂವಹನ ಮತ್ತು ಕಣ್ಗಾವಲು ವ್ಯವಸ್ಥೆಯೇ ನಮ್ಮ ಕಾರ್ಯಾಚರಣೆಯ ಭಾಗವಾಗಿದೆ ಎಂದರು.
ಬೆಳಗಾವಿ : ಡಿನ್ನರ್ ಬ್ರೇಕ್‌ಫಾಸ್ಟ್ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…