Mysore
21
mist

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಸತತ 7 ನೇ ಬಾರಿ ರಾಜಣ್ಣ ಗೆಲುವು

kn rajanna (1)

ತುಮಕೂರು : ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗುರುವಾರ ನಡೆದ ಚುನಾವಣೆಯಲ್ಲಿ 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದು, ಅವರ ಅಭಿಮಾನಿಗಳ ಸಂಭ್ರಮ ಹೇಳ ತೀರದಾಗಿದೆ. ರಾಜಣ್ಣ ಅವರ ಈ ಸಾಧನೆ ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅವರ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಇದನ್ನು ಓದಿ:ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಿ: ಸಿದ್ಧಗಂಗಾ ಶ್ರೀ ಆಗ್ರಹ

ಕೆ.ಎನ್. ರಾಜಣ್ಣ ಕರ್ನಾಟಕದ ಸಹಕಾರಿ ಕ್ಷೇತ್ರದಲ್ಲಿ 1972ರಿಂದಲೂ ತಮ್ಮ ಪ್ರಭಾವವನ್ನು ಸ್ಥಾಪಿಸಿದ್ದಾರೆ. ರಾಷ್ಟ್ರೀಯ ಕೃಷಿ ಸಹಕಾರ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಅಧ್ಯಕ್ಷರಾಗಿ (2001-2005 ಮತ್ತು 2015-2020) ಎರಡು ಅವಧಿಗಳಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಅವರು ಹೊಂದಿದ್ದಾರೆ.

ಈ ಹಿಂದೆ ಆರು ಬಾರಿ ಈ ಸ್ಥಾನವನ್ನು ಅಲಂಕರಿಸಿದ್ದ ರಾಜಣ್ಣ, ತಮ್ಮ ಅನುಭವ ಮತ್ತು ನಾಯಕತ್ವದ ಮೂಲಕ ಬ್ಯಾಂಕ್‌ನ ಕಾರ್ಯನಿರ್ವಹಣೆಯನ್ನು ಸುಧಾರಿಸಿದ್ದಾರೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‌ನ ಕ್ಯಾತಸಂದ್ರ ತಾಲೂಕು ಘಟಕದ ಕಾರ್ಯದರ್ಶಿಯಾಗಿ 1972ರಲ್ಲಿ ತಮ್ಮ ರಾಜಕೀಯ ಜೀವನ ಆರಂಭಿಸಿದ ಕೆ.ಎನ್.ರಾಜಣ್ಣ 1998ರಲ್ಲಿ ಕರ್ನಾಟಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. 2004ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದಾಗ ಜೆಡಿಎಸ್ ನಿಂದ ಬೆಳ್ಳಾವಿ ಕ್ಷೇತ್ರದಿಂದ ಗೆದ್ದಿದ್ದರು.

ಇದನ್ನು ಓದಿ:ಕೆ.ಎನ್.ರಾಜಣ್ಣ ಮಾಡಿದ ಘೋರ ಅಪರಾಧವೇನು?: ವಿಜಯೇಂದ್ರ ಪ್ರಶ್ನೆ

2013 ಮತ್ತು 2023ರಲ್ಲಿ ಮಧುಗಿರಿ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. 2023ರಲ್ಲಿ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಸಹಕಾರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಆದರೆ ಆಗಸ್ಟ್ 2025ರಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರ ಮತ ಕಳ್ಳತನ ಆರೋಪದ ವಿರುದ್ಧ ಟೀಕೆ ಮಾಡಿದ್ದಕ್ಕೆ ಸಂಪುಟದಿಂದ ಕೈಬಿಡಲಾಯಿತು.

Tags:
error: Content is protected !!