ದಾವಣಗೆರೆ: ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಅದು ಮೇಕೆ ಮಾಂಸ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವ್ಯಾಪಾರಿಯೊಬ್ಬರು ರೈಲಿನಲ್ಲಿ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ಮೇಕೆ ಮಾಂಸ ಎಂಬುದನ್ನು ಪ್ರಯೋಗಾಲಯ ದೃಢಪಡಿಸಿದೆ. ನಾಯಿ ಮಾಂಸ ಎಂಬುದಾಗಿ ದುರುದ್ದೇಶದಿಂದ ಗಲಾಟೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಿಡಿಕಾರಿದರು.
ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಗಳಿಗೊಮ್ಮೆ ಮಾಂಸ ಮಾರಾಟ ಮಾಡುತ್ತಾರೆ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂದು ವರದಿಯಲ್ಲಿ ದೃಢವಾಗಿದೆ ಎಂದು ಸ್ಪಷ್ಟಪಡಿಸಿದರು.
ಇನ್ನು ಬೆಂಗಳೂರಿಗೆ ಕುರಿ ಮಾಂಸದ ಜೊತೆಗೆ ನಾಯಿ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಕೆಲವರು ಆರೋ ಮಾಡಿದ್ದರು. ಇದರಿಂದ ಎಚ್ಚೆತ್ತ ಆಹಾರ ಇಲಾಖೆ ಅಧಿಕಾರಿಗಳು ವಿಚಾರಣೆ ತೀವ್ರಗೊಳಿಸಿ, ಕೋಲ್ಡ್ ಸ್ಟೋರೇಜ್‌ನಲ್ಲಿದ್ದ ಮತ್ತು ಅಂಗಡಿಗಳಲ್ಲಿ ಇದ್ದ ಮಾಂಸಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದರು. ಇಂದು ಪರೀಕ್ಷೆ ವರದಿ ಬಂದಿದ್ದು, ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ ಎಂದು ದೃಢವಾಗಿದೆ.