ರಾಜ್ಯ

ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಮೇಕೆ ಮಾಂಸ: ಗೃಹ ಸಚಿವ ಜಿ.ಪರಮೇಶ್ವರ್‌

ದಾವಣಗೆರೆ: ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ನಾಯಿ ಮಾಂಸವಲ್ಲ, ಅದು ಮೇಕೆ ಮಾಂಸ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವ್ಯಾಪಾರಿಯೊಬ್ಬರು ರೈಲಿನಲ್ಲಿ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ಮೇಕೆ ಮಾಂಸ ಎಂಬುದನ್ನು ಪ್ರಯೋಗಾಲಯ ದೃಢಪಡಿಸಿದೆ. ನಾಯಿ ಮಾಂಸ ಎಂಬುದಾಗಿ ದುರುದ್ದೇಶದಿಂದ ಗಲಾಟೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಿಡಿಕಾರಿದರು.

ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಗಳಿಗೊಮ್ಮೆ ಮಾಂಸ ಮಾರಾಟ ಮಾಡುತ್ತಾರೆ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂದು ವರದಿಯಲ್ಲಿ ದೃಢವಾಗಿದೆ ಎಂದು ಸ್ಪಷ್ಟಪಡಿಸಿದರು.

ಇನ್ನು ಬೆಂಗಳೂರಿಗೆ ಕುರಿ ಮಾಂಸದ ಜೊತೆಗೆ ನಾಯಿ ಮಾಂಸ ಸಾಗಾಟ ಮಾಡಲಾಗುತ್ತಿದೆ ಎಂದು ಕೆಲವರು ಆರೋ ಮಾಡಿದ್ದರು. ಇದರಿಂದ ಎಚ್ಚೆತ್ತ ಆಹಾರ ಇಲಾಖೆ ಅಧಿಕಾರಿಗಳು ವಿಚಾರಣೆ ತೀವ್ರಗೊಳಿಸಿ, ಕೋಲ್ಡ್‌ ಸ್ಟೋರೇಜ್‌ನಲ್ಲಿದ್ದ ಮತ್ತು ಅಂಗಡಿಗಳಲ್ಲಿ ಇದ್ದ ಮಾಂಸಗಳ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದ್ದರು.  ಇಂದು ಪರೀಕ್ಷೆ ವರದಿ ಬಂದಿದ್ದು, ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ ಎಂದು ದೃಢವಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

2 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

2 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago