ರಾಜ್ಯ

ಲಾಂಗ್‌ ಹಿಡಿದು ರೀಲ್ಸ್‌ ಮಾಡಿದ ಪ್ರಕರಣ: ಜೈಲಿನಿಂದ ರಿಲೀಸ್‌ ಆದ ರಜತ್‌ ಹಾಗೂ ವಿನಯ್‌ ಗೌಡ

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್‌ ಮಾಡಿ ಜೈಲು ಪಾಲಾಗಿದ್ದ ರಜತ್‌ ಹಾಗೂ ವಿನಯ್‌ ಗೌಡ ಇಂದು ಜೈಲಿನಿಂದ ರಿಲೀಸ್‌ ಆಗಿದ್ದಾರೆ.

ಮಚ್ಚು ಹಿಡಿದು ದರ್ಶನ್‌ ಸಿನಿಮಾ ಸಾಂಗ್‌ಗೆ ರೀಲ್ಸ್‌ ಮಾಡಿದ್ದ ರಜತ್‌ ಹಾಗೂ ವಿನಯ್‌ ಗೌಡರನ್ನು ಪೊಲೀಸರು ಬಂಧಿಸಿದ್ದರು.

ಈ ಹಿನ್ನೆಲೆಯಲ್ಲಿ ಜಾಮೀನು ಕೋರಿ ಇಬ್ಬರು 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ನಿನ್ನೆ ನ್ಯಾಯಾಲಯವು ಇಬ್ಬರಿಗೂ ಜಾಮೀನು ಮಂಜೂರು ಮಾಡಿತ್ತು. ಇಂದು ಪೊಲೀಸರ ಕೈಗೆ ಬೇಲ್‌ ಪ್ರತಿ ತಡವಾಗಿ ಸಿಕ್ಕ ಹಿನ್ನೆಲೆಯಲ್ಲಿ ರಜತ್‌ ಹಾಗೂ ವಿನಯ್‌ ಜೈಲಿನಿಂದ ಬಿಡುಗಡೆ ಆಗಿದ್ದಾರೆ.

ರಿಲೀಸ್‌ ಆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಿನಯ್‌, ಎಲ್ಲರೂ ತುಂಬಾ ಸಪೋರ್ಟ್‌ ಮಾಡಿದ್ದೀರಿ. ಎಲ್ಲರೂ ಸೇರಿ ಮಾತನಾಡೋಣ ಹೇಳಿ ತೆರಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವೋಟ್‌ ಚೋರಿ | ಸತ್ಯದ ಬೆನ್ನಿಗೆ ನಿಂತು ಮೋದಿ, ಶಾ, ಆರ್‌ಎಸ್‌ಎಸ್‌ ಅನ್ನು ಖಾಲಿ ಮಾಡಿಸುತ್ತೇವೆ : ಕಾಂಗ್ರೆಸ್‌ ಶಪಥ

ಹೊಸದಿಲ್ಲಿ : ವೋಟ್ ಚೋರಿ ವಿರುದ್ಧ ಮತ್ತೆ ರಾಷ್ಟ್ರ ಮಟ್ಟದಲ್ಲಿ ಅಬ್ಬರಿಸಿರುವ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು…

51 mins ago

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಬೆಂಗಳೂರು : ಕಾಂಗ್ರೆಸ್‌ನ ಹಿರಿಯ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ(95) ಅವರು ನಿಧನರಾಗಿದ್ದಾರೆ.…

2 hours ago

ಆಯ್ತಪ್ಪ ನಾಳೆ ʻಗ್ಯಾರಂಟಿʼ ನಿಲ್ಲಿಸಿತ್ತೀವಿ ಬಿಡಿ : ಪರಮೇಶ್ವರ್‌ ಹೀಗೆ ಹೇಳಿದ್ಯಾಕೆ?

ತುಮಕೂರು : ವಿರೋಧ ಪಕ್ಷದವರು ಪದೇ ಪದೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯನ್ನು ವಿರೋಧಿಸುತ್ತಾರೆ. ಗ್ಯಾರಂಟಿ ಕೊಡದೆ ರಸ್ತೆ,…

2 hours ago

ಇಂದಿರಾಗಾಂಧಿ ತ್ಯಾಗದ ಮುಂದೆ ನಮ್ಮದೇನು ಇಲ್ಲ : ಖರ್ಗೆ ಭಾವುಕ ನುಡಿ

ಹೊಸದಿಲ್ಲಿ : ಇಂದು ನನ್ನ ಮಗನಿಗೆ ಎಂಟು ಗಂಟೆಯ ಆಪರೇಷನ್‌ ಇತ್ತು. ಪತ್ನಿ, ಮಗಳು ಎಲ್ಲರೂ ಫೋನ್‌ ಮಾಡಿ ಬಹಳ…

2 hours ago

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ ; ಸಾರ್ವಜನಿಕರಲ್ಲಿ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!

ಮೈಸೂರು : ನಿರ್ದಿಷ್ಟ ಬ್ರಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ 'ಜಿನೋಟಾಕ್ಸಿಕ್ ಅಂಶ' ಪತ್ತೆಯಾಗಿದೆ ಎಂದು ಹೇಳುವ ವೈರಲ್ ವಿಡಿಯೋ ಇದೀಗ…

2 hours ago

ಯತ್ನಾಳ್‌, ಸಂತೋಷ್‌ ಲಾಡ್‌ ಮಧ್ಯ ಸೈದ್ಧಾಂತಿಕ ವಾರ್‌ : ಶಿವಾಜಿ ಮುಸ್ಮಿಂ ವಿರೋಧಿಗಳಲ್ಲ ; ಲಾಡ್‌

ಬೆಳಗಾವಿ : ಮರಾಠರು ಮುಸ್ಲಿಂ ವಿರೋಧಿ ಅಂತ‌ ಹಣೆಪಟ್ಟಿ ಕಟ್ಟಿಕೊಂಡಿದ್ದೇವೆ. ನಾವು ಮೊಘಲರ ವಿರುದ್ಧ ಇದ್ದೆವು. ಆದರೆ ಮುಸ್ಲಿಂರ ವಿರೋಧಿಗಳಾಗಿರಲಿಲ್ಲ.…

3 hours ago