ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ರಜತ್ ಹಾಗೂ ವಿನಯ್ ಗೌಡರನ್ನು 3 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಈ ಕುರಿತು 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
5 ದಿನ ಕಸ್ಟಡಿಗೆ ನೀಡುವಂತೆ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದ್ದರು. ಆದರೆ ನ್ಯಾಯಾಲಯ ಮೂರು ದಿನಗಳ ಕಾಲ ಕಸ್ಟಡಿಗೆ ನೀಡಿದೆ. ಮಾರ್ಚ್.28ರವರೆಗೆ ಪೊಲೀಸ್ ಕಸ್ಟಡಿಗೆ ಕೋರ್ಟ್ ಆದೇಶ ನೀಡಿದೆ.
ರಜತ್ ಹಾಗೂ ವಿನಯ್ ಗೌಡ ಅವರು, ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಈಗ ಇಬ್ಬರು ಕಾನೂನು ಸಂಕಷ್ಟ ಎದುರಿಸುವಂತಾಗಿದೆ.