ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು ಮಂಜೂರಾಗಿದೆ.
ಶಿಡ್ಲಘಟ್ಟ ಜೆಎಂಎಫ್‌ಸಿ ನ್ಯಾಯಾಲಯವು ಇಂದು (ಜನವರಿ 30) ಆರೋಪಿ ರಾಜೀವ್ ಗೌಡ ಅವರ ಜಾಮೀನು ಅರ್ಜಿಯನ್ನು ಪರಿಗಣಿಸಿ ಮಂಜೂರು ಮಾಡಿದೆ ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡ ಅವರಿಗೆ ಜಾಮೀನು ನೀಡುವಾಗ ನ್ಯಾಯಾಲಯವು ಕೆಲವು ಷರತ್ತುಗಳನ್ನು ವಿಧಿಸಿದೆ. ಜೊತೆಗೆ ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಬೆಂಬಲಿಗರಿಗೆ ತಾಕೀತು ಮಾಡಲಾಗಿದೆ.
ಘಟನೆ ಹಿನ್ನೆಲೆ
ಶಿಡ್ಲಘಟ್ಟದಲ್ಲಿ ಅನಧಿಕೃತ ಬ್ಯಾನರ್‌ಗಳು ಮತ್ತು ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ್ದಕ್ಕೆ ಅಸಮಾಧಾನಗೊಂಡ ರಾಜೀವ್ ಗೌಡ ಅವರು ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಫೋನ್ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು ಎಂಬ ಆರೋಪವಿತ್ತು. ಈ ಪ್ರಕರಣದಲ್ಲಿ ಶಿಡ್ಲಘಟ್ಟ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.
ರಾಜೀವ್ ಗೌಡ ಅವರು ಘಟನೆಯ ನಂತರ ತಲೆಮರೆಸಿಕೊಂಡಿದ್ದು, ಕೇರಳ ಗಡಿಯಲ್ಲಿ ಬಂಧನಕ್ಕೊಳಗಾಗಿದ್ದರು. ಮೊದಲು ಜಾಮೀನು ಅರ್ಜಿ ವಜಾಗೊಂಡು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದರು. ನಂತರದ ವಿಚಾರಣೆಯಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ…
ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ…
ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…
ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…
ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…
ಸರಗೂರು ಹಾಗೂ ಎಚ್.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…