ಬೆಂಗಳೂರು: ನಗುವಿನ ನಶೆಯಲ್ಲಿ ತೇಲಿಸಿ, ನಮ್ಮನ್ನು ನಕ್ಕು ನಗಿಸುತ್ತಿದ್ದ ಕಲಿಯುಗದ ಕುಡುಕ ಎಂದೇ ಖ್ಯಾತಿ ಗಳಿಸಿದ್ದ ವಿಜಯಪುರದ ರಾಜು ತಾಳಿಕೋಟೆ ಮಿಂಚಿ ಮರೆಯಾಗಿದ್ದಾರೆ.
ಹಾಸ್ಯನಟ, ರಂಗಾಯನ ನಿರ್ದೇಶಕ ರಾಜು ತಾಳಿಕೋಟೆಯ ಪಾರ್ಥಿವ ಶರೀರವನ್ನು ಧಾರವಾಡ ರಂಗಾಯಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ರಾಜು ತಾಳಿಕೋಟೆ ಅಂತಿಮ ದರ್ಶನವನ್ನು ಧಾರವಾಡ ಜಿಲ್ಲಾಧಿಕಾರಿ, ಸಿಇಓ ಸೇರಿದಂತೆ ಅನೇಕ ಕಲಾವಿದರು ಅಂತಿಮ ದರ್ಶನ ಪಡೆದುಕೊಂಡರು. ಇನ್ನು ಪಾರ್ಥಿವ ಶರೀರದ ಎದುರು ಕಾಮಿಡಿ ಕಿಲಾಡಿ ಖ್ಯಾತಿಯ ಸಂಜು ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದರು.
ಇದನ್ನು ಓದಿ: ರಂಗ ಕಲಾವಿದ, ಹಾಸ್ಯನಟ ರಾಜು ತಾಳಿಕೋಟೆ ನಿಧನ
ತಾಳಿಕೋಟೆಯ ಧಾರವಾಡದಿಂದ ವಿಜಯಪುರಕ್ಕೆ ಕೊಂಡೊಯ್ದ ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿರುವ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಿತು. ಅಂತ್ಯಕ್ರಿಯೆ ವೇಳೆ ಮೃತ ಕುಟುಂಬಸ್ಥರ ಕಣ್ಣೀರು ಮುಗಿಲು ಮುಟ್ಟಿತ್ತು.
ಇಡೀ ಕನ್ನಡ ಚಿತ್ರರಂಗವನ್ನು ಮತ್ತು ರಂಗಭೂಮಿಯನ್ನು ನಗುವಿನ ನಶೆಯಲ್ಲಿ ತೇಲಿಸುತ್ತಿದ್ದ ರಾಜು ತಾಳಿಕೋಟೆಯ ಸಾವು ನಿಜಕ್ಕೂ ಬರಸಿಡಿಲು ಬಡಿದಂತಾಗಿದೆ. ರಂಗಭೂಮಿಗೆ ಇವರ ಸಾವು ತುಂಬಲಾರದ ನಷ್ಟವಾಗಿದೆ.





