ರಾಜ್ಯ

ರಾಜ್ಯಸಭೆ ಚುನಾವಣೆ : ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್‌ ಖರ್ಗೆ

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಲು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಸಮುಖದಲ್ಲಿ ಖರ್ಗೆ ಅವರು, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಯಾಗಿರುವ ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.

ಖರ್ಗೆ ಅವರೊಂದಿಗೆ ಎಐಸಿಸಿ ಮಾಧ್ಯಮ ಘಟಕದ ಅಧ್ಯಕ್ಷ ಪವನ್‌ ಖೇರಾ, ಎಐಸಿಸಿ ಕಾರ್ಯದರ್ಶಿ ಮನ್ಸೂರ್‌ ಆಲಿಖಾನ್‌ ಅವರು ರಾಜ್ಯಸಭೆ ಸದಸ್ಯರಾಗಲು ನಾಮಪತ್ರ ಸಲ್ಲಿಸಿದ್ದಾರೆ. ಕರ್ನಾಟಕ ವಿಧಾನಸಭೆಯಲ್ಲಿ ಕಾಂಗ್ರೆಸ್‌‍ ಪಕ್ಷ 134 ಸದಸ್ಯರನ್ನು ಹೊಂದಿದ್ದು, 5 ಮಂದಿ ಪಕ್ಷೇತರರು ಹಾಗೂ ಇತರ ಸದಸ್ಯರ ಬಲ ಹೊಂದಿದೆ. ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಇಬ್ಬರು ಸದಸ್ಯರು ಕಾಂಗ್ರೆಸ್‌‍ ಪರವಾಗಿ ಮತ ಚಲಾಯಿಸುವ ಸಾಧ್ಯತೆ ಇದೆ.

141 ಸಾಧ್ಯತೆ ಮತಗಳನ್ನು ಹೊಂದಿರುವ ಕಾಂಗ್ರೆಸ್‌‍ ಪಕ್ಷ ರಾಜ್ಯಸಭೆಯಲ್ಲಿ 3, ವಿಧಾನ ಪರಿಷತ್ತಿನಲ್ಲಿ 4 ಸದಸ್ಯರನ್ನು ಚುನಾಯಿಸಿಕೊಳ್ಳಲು ಸುಲಭ ಅವಕಾಶಗಳಿವೆ. ವಿಧಾನಪರಿಷತ್ತಿಗೆ ಬಿ.ಕೆ.ಹರಿಪ್ರಸಾದ್‌, ತಿಪ್ಪಣ್ಣಪ್ಪ ಕಮಕನೂರು, ಪಿ.ವಿ.ಮೋಹನ್‌, ಶಿವಣ್ಣ ಮಳವಳ್ಳಿ ಅವರನ್ನು ಈಗಾಗಲೇ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇದೇ ತಿಂಗಳ 18ರಂದು ರಾಜ್ಯಸಭೆಯ 4 ಹಾಗೂ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ 7 ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ.

 

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago