Mysore
22
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ : ಹೆಚ್‌ಡಿಕೆ!

ಚಿಕ್ಕಮಗಳೂರು: ರಾಮ ಮಂದಿರ ಉದ್ಘಾಟನೆ ಭಾರತದ ಹಬ್ಬ ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣವಾಗಬೇಕು ಎನ್ನುವುದು ದೇಶದ ಜನರ ನಿರೀಕ್ಷೆ. ಹಲವು ವರ್ಷಗಳ ಗೊಂದಲಕ್ಕೆ ಸುಪ್ರೀಂ ಕೋರ್ಟ್ ತೆರೆ ಎಳೆದಿದೆ ಎಂದರು.

ಕಾಂಗ್ರೆಸ್ಸಿಗರು ರಾಮ ಮಂದಿರ ಉದ್ಘಾಟನೆಗೆ ಹೋಗದ ವಿಚಾರಕ್ಕೆ ಕೇಳಿದ ಪ್ರಶ್ನೆಗೆ, ಯಾಕೆ ಹೋಗುವುದಿಲ್ಲ ಎಂದು ಅವರೇ ಹೇಳಬೇಕು. ಅವರ ತೀರ್ಮಾನ ನನಗೆ ಸಂಬಂಧವಿಲ್ಲ. ರಾಮ ಮಂದಿರ ನಿಜವಾದ ರಾಮ ರಾಜ್ಯದ ಕನಸು ಎಂದು ಹೇಳಿದರು.

ಕಳೆದ ಬಾರಿಯ ಲೋಕಸಭೆ ಚುನಾವಣೆ ಬೇರೆ. ಈ ಚುನಾವಣೆ ಬೇರೆ ಇರುತ್ತದೆ. ಇವತ್ತು ಮಂಡ್ಯದಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತ ಗೆಲ್ಲುವ ವಾತಾವರಣ ಇದೆ.

ಕಳೆದ ಬಾರಿ ರೈತ ಸಂಘ, ಬಿಜೆಪಿ, ಕಾಂಗ್ರೆಸ್ ಎಲ್ಲರೂ ಪಕ್ಷೇತರ ಅಭ್ಯರ್ಥಿ ಪರ ಮತ ಹಾಕಿದ್ದರು. ಈಗ ಮಂಡ್ಯದಲ್ಲಿ ಆ ವಾತಾವರಣ ಇಲ್ಲ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!