ಬೆಂಗಳೂರು: ಅಯೋಧ್ಯ ರಾಮ ಮಂದಿರ ಉದ್ಘಾಟನೆ ಹಿನ್ನಲೆ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಾಮಜಿಕ ಜಾಳತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ʼಅಯೋಧ್ಯೆಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.
ಈಗಾಗಲೇ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹರಿಬಿಟ್ಟು ಅಮಾಯಕ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಕಿವಿಗೆ ಬಿದ್ದ ತಕ್ಷಣ ಆತುರಕ್ಕೆ ಬಿದ್ದು ಆವೇಶಕ್ಕೆ ಒಳಗಾಗದೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಬೇಕು.
ಯಾವುದೇ ಕಾರಣಕ್ಕೂ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳುವ ಅಧಿಕಪ್ರಸಂಗತನವನ್ನು ಮಾಡಬಾರದು. ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಕಾಂಗ್ರೆಸ್ ಸರ್ಕಾರ ಹೊಣೆಯಾಗುತ್ತದೆ ಎಂದು ಹೇಳಿದ್ದಾರೆ.
ಈ ಹೇಳಿಕೆಯಲ್ಲಿ ಶಾಂತಿ ಕಾಪಾಡಿಕೊಂಡು ಬರಬೇಕೆಂಬ ಸದಾಶಯಕ್ಕಿಂತ ಹೆಚ್ಚಾಗಿ ಬೆದರಿಕೆ ಮತ್ತು ಪ್ರಚೋದನೆಯ ದನಿ ಇದೆ. ಸರ್ಕಾರಕ್ಕೆ ಅದರ ಕರ್ತವ್ಯದ ಅರಿವಿದೆ.
ತಪ್ಪು ನಡೆದರೆ ಕಾನೂನು ಅದರ ಕೆಲಸ ಮಾಡುತ್ತದೆ. ಬಿಜೆಪಿಯ ಕೆಲವು ಶಾಸಕರು, ಸಂಸದರು ಈಗಾಗಲೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವುದನ್ನು ರಾಜ್ಯ ಸರ್ಕಾರ ಗಮನಿಸಿದೆ.
ಇಂತಹವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಕಠಿಣ ಕ್ರಮಗಳನ್ನು ಕೈಗೊಂಡರೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸರ್ಕಾರದ ಕೆಲಸ ಸುಲಭವಾಗುತ್ತದೆ. ದೇವರು – ಧರ್ಮ – ಪೂಜೆ – ಆರಾಧನೆಗಳೆಲ್ಲ ವೈಯಕ್ತಿಕವಾದುದು.
ಇದನ್ನು ವೈಯಕ್ತಿಕ ಮಟ್ಟದಲ್ಲಿಯೇ ಉಳಿಸಿಕೊಂಡರೆ ದೇವರು – ಧರ್ಮ ಎಲ್ಲರಿಗೂ ಗೌರವ ಮತ್ತು ಸಮಾಜಕ್ಕೂ ಕ್ಷೇಮ. ಇದು ಎಲ್ಲ ಧರ್ಮಾನುಯಾಯಿಗಳಿಗೂ ಅನ್ವಯಿಸುತ್ತದೆʼ ಎಂದು ತಿಳಿಸಿದ್ದಾರೆ.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…