ಬೆಂಗಳೂರು: ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ರಾಜ್ಯಗಳು ಅಧಿಕ ತೆರಿಗೆ ಕೇಳೋದು ಸಣ್ಣತನವೆಂದು ನೀಡಿರುವ ಹೇಳಿಕೆಯೇ ಸಣ್ಣತನವಾಗಿದೆ ಎಂದು ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ.
ವಿಧಾನಸೌಧದಲ್ಲಿ ಇಂದು(ಫೆಬ್ರವರಿ.10) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಪಿಯೂಷ್ ಅವರಿಗೆ ಸಾಮಾನ್ಯ ಜ್ಞಾನವಿಲ್ಲದೇ ಇರುವುದರಿಂದ ಹಾಗೇ ಹೇಳಿಕೆಗಳನ್ನು ನೀಡಿದ್ದಾರೆ. ನಮ್ಮ ರಾಜ್ಯದಿಂದ ಸುಮಾರು 4.5 ಲಕ್ಷ ಕೋಟಿ ಜಿಎಸ್‌ಟಿ ಮೂಲಕ ಕೇಂದ್ರಕ್ಕೆ ಹೋಗುತ್ತದೆ. ಹೀಗಾಗಿ ನಮ್ಮ ಹಕ್ಕನ್ನು ನಾವು ಕೇಳುವುದರಲ್ಲಿ ತಪ್ಪೇನಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನೂ ಕೇಂದ್ರದಿಂದ ನಮಗೆ 1 ರೂಪಾಯಿಗೆ 12 ಪೈಸೆ ಮಾತ್ರ ಸಿಗುತ್ತಿದೆ. ನಮ್ಮ ರಾಜ್ಯದಿಂದ ಅಷ್ಟು ತೆರಿಗೆ ಕಟ್ಟಿದರು ಅವರು ನಮ್ಮ ರಾಜ್ಯದ ಅಭಿವೃದ್ಧಿಗೆ ಸರಿಯಾದ ಹಣವನ್ನು ಬಿಡುಗಡೆ ಮಾಡುವುದಿಲ್ಲ. ಹಾಗಾಗಿ ರಾಜ್ಯ ತೆರಿಗೆಯ ಬಗ್ಗೆ ಕೇಳೋದು ಸರಿಯಲ್ಲ ಎನ್ನುವುದು ಸರಿಯಲ್ಲ ಎಂದು ಹೇಳಿದರು.
ರಾಜ್ಯಗಳು ತೆರಿಗೆ ಕಟ್ಟುವಾಗ ಕೇಂದ್ರದಿಂದ ಅಧಿಕ ಪಾಲು ನೀಡಿ ಎಂದು ಕೇಳೋದು ತಪ್ಪಲ್ಲ. ಪಿಯೂಷ್ ಅವರು ಕರ್ನಾಟಕದವರು ಆಗಿದ್ದರೆ ಏನು ಮಾಡುತ್ತಿದ್ದರು? ಆಗ ಅವರು ಇದೇ ರೀತಿ ಹೇಳುತ್ತಿದ್ದರಾ? ಹಾಗದರೆ ನಾವು ಕೇಂದ್ರಕ್ಕೆ ಅಧಿಕ ತೆರಿಗೆ ಪಾವತಿಸುವುದು ತಪ್ಪಾ ಎಂದು ಪ್ರಶ್ನಿಸಿದರು.
ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…
ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…
ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…
ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…
ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…
ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…