Mysore
26
few clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಕೆಎಸ್‌ಆರ್‌ಟಿಸಿ ಬಸ್‌ ದರ ಏರಿಸುವ ಯಾವುದೇ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ ದರ ಏರಿಸುವ ಸಂಬಂಧ ಈವರೆಗೆ ಯಾವುದೇ ಪ್ರಸ್ತಾವವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.

ಈ ಬಗ್ಗೆ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ದರ ಏರಿಕೆ ಮಾಡುವ ಚಿಂತನೆ ಬಂದಿಲ್ಲ. ಈ ಬಗ್ಗೆ ಯಾವುದೇ ಪ್ರಸ್ತಾವ ಬಂದಿಲ್ಲ ಎಂದರು.

ಕೆಎಸ್‌ಆರ್‌ಟಿಸಿ ಅಧ್ಯಕ್ಷ ಶ್ರೀನವಾಸ್‌ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಶ್ರೀನವಾಸ್‌ ಅವರು ಪ್ರಸ್ತಾವ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಆದರೆ ಈವರೆಗೆ ಯಾವುದೇ ಪ್ರಸ್ತಾವ ಸಲ್ಲಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.

Tags: