ರಾಜ್ಯ

ಜಲಸಂಪನ್ಮೂಲ ಖಾತೆ ತ್ಯಜಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ರಾಮಲಿಂಗರೆಡ್ಡಿ

ಬೆಂಗಳೂರು : ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದೆ. ತಮಗೆ ಇಷ್ಟವಿಲ್ಲದ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ಯಾರ ಮನವೊಲಿಕೆಗೂ ಬಗ್ಗದ ರೆಡ್ಡಿ, “ನನ್ನ ನಿರ್ಧಾರ ಅಚಲ, ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲ” ಎಂದು ಹಠ ಹಿಡಿದಿರುವುದು ಡಿಕೆಶಿ ಪಾಲಿಗೆ ಆರಂಭದಲ್ಲೇ ಅತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ರಾಮಲಿಂಗಾರೆಡ್ಡಿ ಅವರು ಕೇವಲ ಖಾತೆಗಾಗಿ ರಾಜೀನಾಮೆ ನೀಡುತ್ತಿಲ್ಲ, ಬದಲಿಗೆ ತಮಗೆ ಕೊಟ್ಟ ಮಾತು ತಪ್ಪಿದ್ದಕ್ಕಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

2023ರಲ್ಲಿ ಸಿದ್ದರಾಮಯ್ಯ ಸಂಪುಟ ರಚನೆ ವೇಳೆ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಡಿಕೆಶಿ ಹಾಗೂ ಭೈರತಿ ಸುರೇಶ್ ಭರವಸೆ ನೀಡಿದ್ದರು. ಆದರೆ ಸಾರಿಗೆ ಖಾತೆ ನೀಡಲಾಯಿತು. ಆಗ ನಾನು ಬೇಸರಗೊಂಡಾಗ, ಮುಂದೆ ತಾವೇ ಸಿಎಂ ಆದಾಗ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನೇ ಕೊಡುವುದಾಗಿ ಡಿಕೆಶಿ ನನ್ನ ಕೋರಮಂಗಲದ ನಿವಾಸಕ್ಕೆ ಬಂದು ಮಾತು ಕೊಟ್ಟಿದ್ದರು. ಆದರೆ ಈಗ ಸಿಎಂ ಆದ ಬೆನ್ನಲ್ಲೇ ಜಲಸಂಪನ್ಮೂಲ ಖಾತೆ ನೀಡಿದ್ದಾರೆ. ಇದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲ ಎಂದು ರೆಡ್ಡಿ ತೀವ್ರ ಬೇಸರ ಹೊರಹಾಕಿದ್ದಾರೆ.

ಇನ್ನು ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಾಂಗ್ರೆಸ್‌ ತೊರೆಯುವುದಿಲ್ಲ. ಸಚಿವ ಸ್ಥಾನಕ್ಕೆ ಮಾತ್ರ ರಾಜೀನಾಮೆ ನೀಡುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮೈಸೂರು ದಸರಾ ಜಂಬೂಸವಾರಿಗೆ ಸಿಎಂ ಡಿಕೆಶಿ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಭ ಮೀನ ಲಗ್ನದಲ್ಲಿ ಚಾಲನೆ ನೀಡಿದರು.…

8 hours ago

ಅಂಬಾರಿ ಹೊತ್ತ ಪ್ರಶಾಂತ ಜಂಬೂ ಸವಾರಿಗೆ ಸಜ್ಜು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯ ಪ್ರಮುಖ ಘಟ್ಟಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರಶಾಂತನಿಗೆ ಸಾಥ್ ನೀಡಲು ಕುಮ್ಕಿ ಆನೆಗಳಾಗಿ ರೂಪ…

8 hours ago

ಜಂಬೂಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧಚಿತ್ರಗಳು

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ವೈವಿಧ್ಯಮಯ ಸ್ತಬ್ಧಚಿತ್ರಗಳು ಹಾಗೂ ಜಾನಪದ ಕಲಾತಂಡಗಳು ವಿಶೇಷ ಮೆರುಗು ನೀಡಿವೆ. ನಾಡಿನ…

8 hours ago

ಚಿನ್ನದ ಅಂಬಾರಿ ಹೊರಲು ಸಿದ್ಧನಾದ ಪ್ರಶಾಂತ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಈಗಾಗಲೇ ಸ್ತಬ್ಧಚಿತ್ರಗಳು ಹಾಗೂ ವಿವಿಧ ಕಲಾತಂಡಗಳು ಸಾಗುತ್ತಿವೆ.…

9 hours ago

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಡಿ.ಕೆ.ಶಿವಕುಮಾರ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಸಂಭ್ರಮದ ನಡುವೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಂದಿಧ್ವಜಕ್ಕೆ ವಿಶೇಷ ಪೂಜೆ ಸಲ್ಲಿಸಿದರು.…

10 hours ago

ಮೈಸೂರು ದಸರಾ ಮಹೋತ್ಸವ: ವಜ್ರಮುಷ್ಠಿ ಕಾಳಗ ರದ್ದು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಸಂಪ್ರದಾಯಗಳಲ್ಲಿ ಒಂದಾದ ವಜ್ರಮುಷ್ಠಿ ಕಾಳಗವನ್ನು ಈ ಬಾರಿ ರದ್ದುಪಡಿಸಲಾಗಿದೆ. ಅರಮನೆಯ ಸವಾರಿ…

13 hours ago