ರಾಜ್ಯ

ರಾಜೀನಾಮೆ ಹಿಂಪಡೆದ ರಾಮಲಿಂಗಾರೆಡ್ಡಿ: ಸರ್ಕಾರಕ್ಕೆ ಎದುರಾಗಿದ್ದ ಕಂಟಕ ತಾತ್ಕಾಲಿಕ ನಿವಾರಣೆ

ಬೆಂಗಳೂರು: ಸೂಕ್ತ ಖಾತೆ ಸಿಗದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರಕ್ಕೆ ಮುಜುಗರ ಸೃಷ್ಟಿಸಿದ್ದ ಸಚಿವ ರಾಮಲಿಂಗ ರೆಡ್ಡಿ ಅವರು, ಹೈಕಮಾಂಡ್ ನಾಯಕರ ಮಧ್ಯ ಪ್ರವೇಶದ ಹಿನ್ನೆಲೆ ರಾಜೀನಾಮೆಯನ್ನು ಹಿಂಪಡೆದಿದ್ದಾರೆ. ಇದರಿಂದ ಸರ್ಕಾರಕ್ಕೆ ಎದುರಾಗಿದ್ದ ಕಂಠಕ ತಾತ್ಕಾಲಿಕವಾಗಿ ನಿವಾರಣೆ ಆದಂತಾಗಿದೆ.

​ರಾಜೀನಾಮೆಯ ಸುದ್ದಿ ಹೊರಬಿದ್ದ ಬೆನ್ನಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಉಂಟಾಗಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಹೈಕಮಾಂಡ್ ತಕ್ಷಣವೇ ಮಧ್ಯಪ್ರವೇಶಿಸಿ, ಹಿರಿಯ ನಾಯಕರೊಂದಿಗೆ ಮಾತುಕತೆ ನಡೆಸಿತು. ಪಕ್ಷದ ಸಂಘಟನೆ ಮತ್ತು ಸರ್ಕಾರದ ಕಾರ್ಯನಿರ್ವಹಣೆಯಲ್ಲಿ ರಾಮಲಿಂಗ ರೆಡ್ಡಿ ಅವರಂತಹ ಅನುಭವಿ ನಾಯಕರ ಅಗತ್ಯವನ್ನು ಮನವರಿಕೆ ಮಾಡಿಕೊಡುವಲ್ಲಿ ವರಿಷ್ಠರು ಯಶಸ್ವಿಯಾಗಿದ್ದಾರೆ.

ಶನಿವಾರ ಕಾಂಗ್ರೆಸ್ ಉಸ್ತುವಾರಿ ರಣಜಿತ್ ಸಿಂಗ್ ಸುರ್ಜೆವಾಲ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ರಾಮಲಿಂಗ ರೆಡ್ಡಿ ಜೊತೆ ಮಾತುಕತೆ ನಡೆಸಿ ರಾಜೀನಾಮೆ ಪತ್ರವನ್ನು ಹಿಂಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ನಿಮ್ಮ ರಾಜೀನಾಮೆಯಿಂದ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಟೀಕೆ ಮಾಡುತ್ತವೆ ಇದರಿಂದ ಕೆಲವರು ನಿಮ್ಮ ದಾರಿಯನ್ನೇ ಅನುಸರಿಸಬಹುದು ಹೀಗಾಗಿ ಕೂಡಲೇ ರಾಜೀನಾಮೆ ಪತ್ರವನ್ನು ಹಿಂಪಡೆದುಕೊಳ್ಳಿ ಎಂದು ಸುರ್ಜೆವಾಲ ಮನವರಿಕೆ ಮಾಡಿಕೊಟ್ಟರು.

ಇದರ ಬೆನ್ನಲ್ಲೇ, ಕೋರಮಂಗಲದಲ್ಲಿರುವ ತಮ್ಮ ಕಚೇರಿ ಆಗಮಿಸಿದ ರೆಡ್ಡಿ ಅವರು ಆಪ್ತರ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದರು.

ಬಳಿಕ ಮತ್ತೆ ಖಾಸಗಿ ಹೋಟೆಲ್ ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಹರಿಪ್ರಸಾದ್ ಹಾಗೂ ಸುರ್ಜೆವಾಲ ಅವರುಗಳು ರಾಮಲಿಂಗ ರೆಡ್ಡಿ ಜೊತೆ ಎರಡನೇ ಬಾರಿ ಮತಗಟ್ಟೆ ನಡೆಸಿ ಮನವೊಲಿಸುವಲ್ಲಿ ಯಶಸ್ವಿಯಾದರು.

ಇದರ ಬೆನ್ನಲ್ಲೇ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಸುರ್ಜೇವಾಲ ಮತ್ತು ಹರಿಪ್ರಸಾದ್ ರಾಮಲಿಂಗ ರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ಹಿಂಪಡೆಯಲ್ಲಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದರು.

ಯಾವುದೇ ಕಾರಣಕ್ಕೂ ನನ್ನ ರಾಜೀನಾಮೆಯನ್ನು ಅಂಗೀಕರಿಸುವುದಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ ಅಂದರೆ ಇದರ ಅರ್ಥ ರಾಜೀನಾಮೆ ಪತ್ರ ತಿರಸ್ಕಾರವಾಗಿದೆ ಎಂಬರ್ಥ. ಮುಂದಿನ ದಿನಗಳಲ್ಲಿ ಸೂಕ್ತವಾದ ಸ್ಥಾನಮಾನ ನೀಡುವ ಭರವಸೆ ಸಿಕ್ಕಿದೆ. ನೋಡೋಣ ಸ್ವಲ್ಪ ದಿನ ಏನಾಗುತ್ತದೆಯೋ ಎಂದು ಸೂಚ್ಯವಾಗಿ ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

1 hour ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

6 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

7 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

7 hours ago