ರಾಮನಗರ: ರಾಮನಗರ ರಾಮ ಪಾದಸ್ಪರ್ಶ ಮಾಡಿರುವ ಭೂಮಿ. ಜಿಲ್ಲೆಯಾದ ನಂತರ ಸಾಕಷ್ಟು ಅಭಿವೃದ್ಧಿ ಆಗಿದೆ. ಭೂಮಿ ಬೆಲೆ ಹೆಚ್ಚಾದರೆ ಎಲ್ಲರೂ ಮಾರಿಕೊಳ್ಳುತ್ತಾರೆ. ಹೀಗಾದರೆ ಮುಂದಿನ ಪೀಳಿಗೆಗೆ ನಾವು ಏನು ಮಾಡೋದು ಎಂದು ಸಂಸದ ಡಾ.ಸಿ.ಎನ್.ಮಂಜುನಾಥ್ ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಪಕ್ಕದ ಜಿಲ್ಲೆಯಾದ ರಾಮನಗರದ ಹೆಸರನ್ನು ಬೆಂಗಳೂರು ದಕ್ಷಿಣ ಅಂತ ಮಾಡೋದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಶತ ಪ್ರಯತ್ನ ಮಾಡುತ್ತಿದ್ದಾರೆ. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಪ್ರತಿಕ್ರಿಯೆ ನೀಡಿದ್ದಾರೆ.
ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ಮಾಡಿದರೆ ಯಾವುದೇ ಅನುಕೂಲ ಇಲ್ಲ. ಬ್ರ್ಯಾಂಡ್ ಬೆಂಗಳೂರಿನಲ್ಲಿಯೇ ಹಲವು ಸಮಸ್ಯೆಗಳಿವೆ. ಇನ್ನು ರಾಮನಗರವನ್ನು ಅಭಿವೃದ್ದಿ ಮಾಡಲು ಹೇಗೆ ಸಾಧ್ಯ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ರಾಮನಗರದ ಭೂಮಿಯಲ್ಲಿ ಬೆಳೆದ ಬೆಳೆಗೆ ಹೆಚ್ಚಿನ ಬೆಲೆ ಸಿಗುವ ಕಡೆ ಗಮನ ಕೊಡಬೇಕೇ ವಿನಃ ಈ ಭೂಮಿಗೆ ಬೆಲೆ ಕಟ್ಟುವ ನಿರ್ಧಾರಕ್ಕೆ ಕೈ ಹಾಕಬಾರದು ಎಂದು ಆಗ್ರಹಿಸಿದ್ದಾರೆ.
ಇನ್ನೂ ರಾಮನಗರಕ್ಕೆ ಮರು ನಾಮಕರಣ ಮಾಡದಂತೆ ಸಿಎಂ ಸಿದ್ದರಾಮಯ್ಯಗೆ ಡಾ.ಮಂಜುನಾಥ್ ಪತ್ರವನ್ನೂ ಬರೆದಿದ್ದಾರೆ.
ಶ್ರೀರಾಮಚಂದ್ರರು ತಮ್ಮ ವನವಾಸದ ಅವಧಿಯನ್ನು ಕಳೆದ ರೇಷ್ಮೆ ನಾಡು ರಾಮನಗರವನ್ನೇ ಬ್ರಾಂಡ್ ಮಾಡಿಕೊಂಡು ಅಭಿವೃದ್ಧಿ ಮಾಡುವತ್ತ ರಾಜ್ಯ ಸರ್ಕಾರ ಗಮನ ನೀಡಲಿ ಎಂದು ಸಂಸದ ಮಂಜುನಾಥ್ ಸಲಹೆ ನೀಡಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…