ರಾಜ್ಯ

ನಮ್ಮ ಸರ್ಕಾರ ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ರಾಮನಗರ: ನಮ್ಮ ಸರ್ಕಾರ ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಬಗ್ಗೆ ತೀವ್ರ ಕಿಡಿಕಾರಿದ್ದಾರೆ.

ಈ ಬಗ್ಗೆ ರಾಮನಗರದಲ್ಲಿ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರ ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಬಿದ್ದು ಹೋಗುತ್ತೆ ಎಂದು ಬಿಜೆಪಿ-ಜೆಡಿಎಸ್‌ ನಾಯಕರು ಮಾತು ಮಾತಿಗೂ ಹೇಳಿಕೆ ನೀಡುತ್ತಾ ಬಂದಿದ್ದಾರೆ.

ನಮ್ಮ ಸರ್ಕಾರಕ್ಕೆ ಯಾವುದೇ ಸಮಸ್ಯೆಯಿಲ್ಲ. ನಮ್ಮ ಸರ್ಕಾರವನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವಿಲ್ಲ. 2028ಕ್ಕೂ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬರುವುದು ನಿಶ್ಚಿತ ಎಂದು ಬಿಜೆಪಿ-ಜೆಡಿಎಸ್‌ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ನವೆಂಬರ್‌ ಅಥವಾ ಡಿಸೆಂಬರ್‌ನಲ್ಲಿ ಸರ್ಕಾರ ಹೊಡೆದು ಹಾಕುತ್ತೇವೆ ಎಂದು ಹೇಳ್ತಾರೆ. ನಮ್ಮ ಸರ್ಕಾರ ಹೊಡೆಯಲು ಅದೇನು ಮಡಿಕೆನಾ ಎಂದು ಪ್ರಶ್ನೆ ಮಾಡಿದರು.

ನಮ್ಮ ಸರ್ಕಾರ ನುಡಿದಂತೆ ನಡೆದಿದ್ದು, ಎಲ್ಲರ ಬದುಕನ್ನು ಬದಲಾಯಿಸಿದೆ. ನಿಮ್ಮ ಬದುಕು ನಮ್ಮ ಉಸಿರು ಎಂದು ಜನಾಂದೋಲನ ಕಾರ್ಯಕ್ರಮದಲ್ಲಿ ಮೈತ್ರಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇನ್ನು ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಟಕ್ಕರ್‌ ಕೊಡಲು ಇಂದು ರಾಮನಗರದಲ್ಲಿ ಜನಾಂದೋಲನ ಕಾರ್ಯಕ್ರಮ ನಡೆಸಿದ ಕಾಂಗ್ರೆಸ್‌ ನಾಯಕರು, ಭಾಷಣದುದ್ದಕ್ಕೂ ಪಾದಯಾತ್ರೆ ಬಗ್ಗೆ ಲೇವಡಿ ಮಾಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ: ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ಭರವಸೆಯಿದ್ದು, ಈ ಬಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ…

6 hours ago

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು  ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ,…

7 hours ago

ಮಾ.28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ: 140 ಬಸ್‌ಗಳ ಕಾರ್ಯಾಚರಣೆ

ಮಂಡ್ಯ: ಮಾರ್ಚ್.‌28ರಂದು ಮೇಲುಕೋಟೆ ವೈರಮುಡಿ ಜಾತ್ರಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ 140 ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ. ಜಾತ್ರಾ…

7 hours ago

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

8 hours ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

8 hours ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

8 hours ago