ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಇನ್ನು ಮುಂದೆ ಬೆಂಗಳೂರು ದಕ್ಷಿಣ ಎಂದು ಬದಲಾಗಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತಗೆದುಕೊಳ್ಳಲಾಗಿದೆ.
ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ರಾಮನಗರ ಹೆಡ್ ಕ್ವಾಟ್ರಸ್ ಅದೇ ಇರುತ್ತದೆ. ಯಾವುದೇ ಬದಲಾವಣೆ ಇಲ್ಲ. ಮೂಲ ಅದು ಬೆಂಗಳೂರು ಜಿಲ್ಲೆಯಾಗಿತ್ತು. ಇಂದಿನಿಂದ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಆಗಿದೆ ಎಂದರು.
ಇನ್ನು ರಾಮನಗರ ಜಿಲ್ಲೆಯ ಹೆಸರನ್ನು ಬದಲಾಯಿಸುವ ಪ್ರಯತ್ನವನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದರು. ಆದರೂ ಡಿಸಿಎಂ ಡಿ.ಕೆ.ಶಿವಕುಮಾರ್ ತಾವು ಹೇಳಿದ್ದನ್ನು ಮಾಡಿ ಎಚ್‌ಡಿಕೆ ವಿರುದ್ಧ ಹಠ ಸಾಧಿಸಿ ಗೆದ್ದಿದ್ದಾರೆ.





