ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.
ನಿನ್ನೆ ಬೆಳಿಗ್ಗೆ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಮಂಗಳಾ ಎಕ್ಸ್‌ಪ್ರೆಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು.
ಖಾಲಿ ಸಿಲಿಂಡರ್, ಗ್ಯಾಸ್ ಸ್ಟವ್ ಹಾಗೂ ಬಟ್ಟೆ ತುಂಬಿದ್ದ ಪ್ಲಾಸ್ಟಿಕ್ ಚೀಲವೊಂದು ಟ್ರಾಕ್ ಬಳಿ ಪತ್ತೆಯಾಗಿದೆ. ಅನುಮಾನಾಸ್ಪದ ವಸ್ತುಗಳನ್ನು ಕಂಡು ಲೋಕೋಪೈಲಟ್ ರೈಲು ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ.
ಇದು ಆಕಸ್ಮಿಕವಾಗಿ ಬಿದ್ದಿರುವ ವಸ್ತುಗಳಾ ಅಥವಾ ಉದ್ದೇಶಪೂರ್ವಕವಾಗಿ ಸಿಲಿಂಡರ್ ಇಡಲಾಗಿದೆಯಾ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸುಮಾರು ಅರ್ಧಗಂಟೆಗಳ ಬಳಿಕ ಮತ್ತೆ ರೈಲು ಸಂಚಾರ ಆರಂಭವಾಗಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೆ.ಬಿ.ರಮೇಶನಾಯಕ ಗೋಲ್ಡ್ ಕಾರ್ಡ್, ಜಂಬೂಸವಾರಿ, ಪಂಜಿನ ಕವಾಯತು ಟಿಕೆಟ್ ಸೋಲ್ಡ್ ಔಟ್ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳ ಪ್ಲಾನ್ ಯಶಸ್ವಿ ಮೈಸೂರು:…
ಪ್ರಶಾಂತ್ ಎಸ್. ಕೆಎಸ್ಟಿಡಿಸಿ ವತಿಯಿಂದ ವ್ಯವಸ್ಥೆ; ಪ್ರತಿನಿತ್ಯ ೩ ಟ್ರಿಪ್ಗಳಲ್ಲಿ ಪ್ರಯಾಣ ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ‘ಅಂಬಾರಿ ಬಸ್’…
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…