ರಾಮನಗರ: ಹೆಡ್ ಕಾನ್ಸ್‌ಟೇಬಲ್ ಓರ್ವರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಲಕ್ಷ್ಮಣ ಎಂಬುವವರೇ ಮೃತ ಹೆಡ್‌ಕಾನ್ಸ್‌ಟೇಬಲ್. ಚನ್ನಪಟ್ಟಣ ಸಂಚಾರಿ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಲಕ್ಷ್ಮಣ ಅವರು ನಿನ್ನೆ ಕರ್ತವ್ಯಕ್ಕೆ ಗೈರಾಗಿದ್ದರು.
ಇಂದು ಅವರ ಶವ ಕೆರೆಯಲ್ಲಿ ಪತ್ತೆಯಾಗಿದೆ. ಹೆಲ್ಮೆಟ್ ಸಹಿತವಾಗಿ ಅವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.
ಕೆರೆಯ ದಡದಲ್ಲಿ ಅವರ ಬೈಕ್ ಕೂಡ ಇದೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.
ಈ ಸಂಬಂಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:-ಸ್ಮಾರ್ಟ್ ಮೀಟರ್ ಟೆಂಡರ್ ಹಗರಣದಲ್ಲಿ ಸಚಿವ ಕೆ.ಜೆ.ಜಾರ್ಜ್‌ಗೆ ಬಿಗ್ ರಿಲೀಫ್





