ರಾಜ್ಯ

ರಾಮನಗರ| ಕೆರೆಯಲ್ಲಿ ಶವವಾಗಿ ಪತ್ತೆಯಾದ ಹೆಡ್‌ ಕಾನ್ಸ್‌ಟೇಬಲ್‌

ರಾಮನಗರ: ಹೆಡ್‌ ಕಾನ್ಸ್‌ಟೇಬಲ್‌ ಓರ್ವರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಲಕ್ಷ್ಮಣ ಎಂಬುವವರೇ ಮೃತ ಹೆಡ್‌ಕಾನ್ಸ್‌ಟೇಬಲ್.‌ ಚನ್ನಪಟ್ಟಣ ಸಂಚಾರಿ ಠಾಣೆಯ ಹೆಡ್‌ಕಾನ್ಸ್‌ಟೇಬಲ್ ಲಕ್ಷ್ಮಣ ಅವರು ನಿನ್ನೆ ಕರ್ತವ್ಯಕ್ಕೆ ಗೈರಾಗಿದ್ದರು.

ಇಂದು ಅವರ ಶವ ಕೆರೆಯಲ್ಲಿ ಪತ್ತೆಯಾಗಿದೆ. ಹೆಲ್ಮೆಟ್‌ ಸಹಿತವಾಗಿ ಅವರ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಕೆರೆಯ ದಡದಲ್ಲಿ ಅವರ ಬೈಕ್‌ ಕೂಡ ಇದೆ. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ.

ಈ ಸಂಬಂಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:-ಸ್ಮಾರ್ಟ್‌ ಮೀಟರ್‌ ಟೆಂಡರ್‌ ಹಗರಣದಲ್ಲಿ ಸಚಿವ ಕೆ.ಜೆ.ಜಾರ್ಜ್‌ಗೆ ಬಿಗ್‌ ರಿಲೀಫ್‌

ಆಂದೋಲನ ಡೆಸ್ಕ್

Recent Posts

ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಸಿಎಂ ಸಿದ್ದರಾಮಯ್ಯ

ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ…

5 mins ago

ಹಾರ್ಮುಜ್‌ ಜಲಸಂಧಿ ದಾಟಲು ಭಾರತಕ್ಕೆ ಇರಾನ್‌ ಸಮ್ಮತಿ

ಟೆಹರಾನ್:‌ ಇರಾನ್‌-ಇಸ್ರೇಲ್‌ ಸಂಘರ್ಷದ ಮಧ್ಯೆಯೇ ಭಾರತಕ್ಕೆ ಮತ್ತೊಂದು ಗುಡ್‌ನ್ಯೂಸ್‌ ಮತ್ತೊಂದು ಗುಡ್‌ನ್ಯೂಸ್‌ ಸಿಕ್ಕಿದೆ. ಭಾರತದ ಧ್ವಜವನ್ನು ಹೊಂದಿರುವ ಎರಡು ದ್ರವೀಕೃತ…

39 mins ago

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿದ…

54 mins ago

ಪೆಟ್ರೋಲ್‌ ಖಾಲಿ ವದಂತಿ: ಬಂಕ್‌ಗಳಿಗೆ ಮುಗಿಬಿದ್ದ ಜನತೆ

ಚಾಮರಾಜನಗರ: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಮುಂದುವರಿದಿದ್ದು, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿರುವ ಪರಿಣಾಮ ಸೋಷಿಯಲ್‌ ಮೀಡಿಯಾದಲ್ಲಿ ಪೆಟ್ರೋಲ್‌, ಡೀಸೆಲ್‌…

1 hour ago

ನಂಜನಗೂಡು| ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ

ನಂಜನಗೂಡು: ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ…

1 hour ago

ಇರಾನ್‌ ಜೊತೆ ಕದನ ವಿರಾಮ ಇಲ್ಲ: ಡೊನಾಲ್ಡ್‌ ಟ್ರಂಪ್‌ ಸ್ಪಷ್ಟನೆ

ವಾಷಿಂಗ್ಟನ್:‌ ಇರಾನ್‌ ಜೊತೆ ಕದನ ವಿರಾಮ್‌ ಮಾಡಿಕೊಳ್ಳಲು ಬಯಸಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. NATO ಮಿತ್ರರಾಷ್ಟ್ರಗಳನ್ನು…

2 hours ago