Mysore
30
scattered clouds

Social Media

ಬುಧವಾರ, 25 ಫೆಬ್ರವರಿ 2026
Light
Dark

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿದ ಕಳ್ಳರು

ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ.

ಸಾಫ್ಟ್‌ವೇರ್‌ ಉದ್ಯೋಗಿಯಾಗಿರುವ ಲಿಖಿತ್‌ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಅರ್ಧ ಕೆಜಿ ಚಿನ್ನ ದೋಚಿ ಪರಾರಿಯಾಗಿದ್ದಾರೆ.

ಸಂಜೆ ಲಿಖಿತ್‌ ಮನೆಗೆ ಬಂದಾಗ ಬೀಗ ಮುರಿದಿರುವುದು ಕಂಡು ಬಂದಿದೆ. ನಂತರ ಬೆಡ್‌ರೂಮ್‌ನ ಕಬೋರ್ಡ್‌ ಗಮನಿಸಿದಾಗ ಚಿನ್ನಾಭರಣ ಕಳ್ಳತನ ಮಾಡಿರುವುದು ಗೊತ್ತಾಗಿದೆ.

ಕಳ್ಳರು ಚಿನ್ನಾಭರಣ ದೋಚಿದ್ದಲ್ಲದೇ ಸಿಸಿಟಿವಿ ಡಿವಿಆರ್‌ ಕೂಡ ತೆಗೆದುಕೊಂಡು ಹೋಗಿದ್ದಾರೆ. ಸ್ಥಳಕ್ಕೆ ರಾಮನಗರ ಟೌನ್‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಕ್ಕಪಕ್ಕದ ಮನೆಯ ಸಿಸಿಟಿವಿ ಪರಿಶೀಲನೆ ಮಾಡಿ ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.

 

Tags:
error: Content is protected !!