ರಾಮನಗರ: ಮನೆ ಬೀಗ ಮುರಿದು ಅರ್ಧ ಕೆಜಿ ಚಿನ್ನ ದೋಚಿರುವ ಘಟನೆ ರಾಮನಗರದ ದ್ಯಾವರಸೇಗೌಡನದೊಡ್ಡಿ ಸಮೀಪ ನಡೆದಿದೆ.
ಸಾಫ್ಟ್‌ವೇರ್ ಉದ್ಯೋಗಿಯಾಗಿರುವ ಲಿಖಿತ್ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಅರ್ಧ ಕೆಜಿ ಚಿನ್ನ ದೋಚಿ ಪರಾರಿಯಾಗಿದ್ದಾರೆ.
ಸಂಜೆ ಲಿಖಿತ್ ಮನೆಗೆ ಬಂದಾಗ ಬೀಗ ಮುರಿದಿರುವುದು ಕಂಡು ಬಂದಿದೆ. ನಂತರ ಬೆಡ್‌ರೂಮ್‌ನ ಕಬೋರ್ಡ್ ಗಮನಿಸಿದಾಗ ಚಿನ್ನಾಭರಣ ಕಳ್ಳತನ ಮಾಡಿರುವುದು ಗೊತ್ತಾಗಿದೆ.
ಕಳ್ಳರು ಚಿನ್ನಾಭರಣ ದೋಚಿದ್ದಲ್ಲದೇ ಸಿಸಿಟಿವಿ ಡಿವಿಆರ್ ಕೂಡ ತೆಗೆದುಕೊಂಡು ಹೋಗಿದ್ದಾರೆ. ಸ್ಥಳಕ್ಕೆ ರಾಮನಗರ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಕ್ಕಪಕ್ಕದ ಮನೆಯ ಸಿಸಿಟಿವಿ ಪರಿಶೀಲನೆ ಮಾಡಿ ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…