ಬೆಂಗಳೂರು- ರಾಜ್ಯ ಸರ್ಕಾರ ಆಯವ್ಯಯದಲ್ಲಿ ಘೋಷಿಸಿದ್ದಂತೆ ರಾಮನಗರದ ರಾಮಗಿರಿಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಚಾಲನೆ ನೀಡಿದೆ. ಇದಕ್ಕಾಗಿ ಆರಂಭಿಕವಾಗಿ 40 ಲಕ್ಷ ರೂ.ಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್ ಅಶ್ವತ್ ನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಮನಗರ ಜಿಲ್ಲೆಯ ಜನತೆಗೆ ಇದು ರಾಮನವಮಿಯ ಉಡುಗೊರೆ ಆಗಿದೆ. ಒಂದೆರೆಡು ವರ್ಷಗಳಲ್ಲಿ ರಾಮದೇವರ ಬೆಟ್ಟದ ಸಮಗ್ರ ಅಭಿವೃದ್ಧಿ ಆಗಲಿದ್ದು, ಇದು ದಕ್ಷಿಣ ಭಾರತದ ಅಯೋಧ್ಯೆಯಾಗಲಿದೆ ಎಂದಿದ್ದಾರೆ.ಇತ್ತೀಚೆಗೆ ಜಿಲ್ಲಾ ಸಚಿವರ ನೇತೃತ್ವದಲ್ಲಿ ರಾಮನಗರದ ಭಕ್ತರ ಗುಂಪು ಅಯೋಧ್ಯೆಗೆ ಭೇಟಿ ನೀಡಿತ್ತು. ಆ ಸಂದರ್ಭದಲ್ಲಿ ಅಲ್ಲಿನ ರಾಮ ಮಂದಿರಕ್ಕೆ ಬೆಳ್ಳಿಯ ಇಟ್ಟಿಗೆ, ರೇಷ್ಮೆ ಸೀರೆ ಮತ್ತು ವಸ್ತ್ರವನ್ನು ಕಾಣಿಕೆಯಾಗಿ ಅರ್ಪಿಸಲಾಗಿದ್ದನ್ನು ಇಲ್ಲಿ ಸ್ಮರಿಸಬಹುದು. ಒಂದೆರೆಡು ದಿನಗಳಲ್ಲೇ ದೇವಸ್ಥಾನಕ್ಕೆ ಸಂಬಂಸಿದಂತೆ ಮಾಸ್ಟರ್ ಪ್ಲಾನ್ ಅಂತಿಮವಾಗಲಿದೆ ಎಂದು ಗೊತ್ತಾಗಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.